ಬೆಂಗಳೂರು: ರಾಜ್ಯದಲ್ಲಿ ಮತ್ತೆ ಸಾರಿಗೆ ನೌಕರರ ಪ್ರತಿಭಟನೆ ಕೂಗು ಕೇಳಿ ಬರುತ್ತಿದ್ದು, ಸೆ.20ರಂದು ನಗರದ ಫ್ರೀಡಂ ಪಾರ್ಕ್ನಲ್ಲಿ ಧರಣಿ ನಡೆಯಲಿದೆ. ಅಂದು ಬಸ್ ಸಂಚಾರದಲ್ಲಿ ವ್ಯತ್ಯಯ ಆಗುವ ಸಾಧ್ಯತೆ ಇದ್ದು, ಪ್ರಯಾಣಿಕರು ಮುಂಜಾಗ್ರತೆ ವಹಿಸುವುದು ಸೂಕ್ತ.
6ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಸಾರಿಗೆ ನೌಕರರು ಈ ಹಿಂದೆ ಕೆಲಕ್ಕೂ ಹಾಜರಾಗದೆ ದೀರ್ಘಾವಧಿ ಮುಷ್ಕರ ನಡೆಸಿದ್ದರು. ಇದೀಗ ಮತ್ತೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ ವತಿಯಿಂದ ಹಲವು ಬೇಡಿಕೆ ಈಡೇರಿಸುಂತೆ ಆಗ್ರಹಿಸಿ ಧರಣಿ ನಡೆಸಲು ನಿರ್ಧರಿಸಲಾಗಿದೆ. ಬಿಎಂಟಿಸಿ, ಕೆಎಸ್ಆರ್ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ಈ ಧರಣಿಯಲ್ಲಿ ಪಾಲ್ಗೊಳ್ಳಲಿದ್ದು, ಸೋಮವಾರ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.
ನೌಕರರ ಬೇಡಿಕೆ ಏನು?