ನ್ಯೂಸ್

ಕುಕ್ಕರ್‌ನಿಂದ ಹೊಡೆದು ಪ್ರಿಯತಮೆ ಕೊಂದ ಪ್ರಿಯಕರ

ಬೆಂಗಳೂರು: ಪರಪುರುಷನೊಂದಿಗೆ ಆತ್ಮೀಯವಾಗಿದ್ದಾಳೆ ಎಂದು ಶಂಕಿಸಿ ಕುಕ್ಕರ್‌ನಿಂದ ಹೊಡೆದು ಪ್ರಿಯಕರನೇ ಪ್ರಿಯತಮೆಯ ಬರ್ಬರ ಹತ್ಯೆ ಮಾಡಿರುವ ಪ್ರಕರಣ ಬೇಗೂರಿನಲ್ಲಿ ನಡೆದಿದೆ.
ಕೇರಳ ಮೂಲದ ದೇವಿ (ದೇವಾ) (೨೪) ಕೊಲೆಯಾದ ಯುವತಿ. ಕೃತ್ಯ ಎಸಗಿದ ವೈಷ್ಣವ್(೨೭) ಎಂಬಾತನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇರಳ ಮೂಲದ ದೇವಿ ಮತ್ತು ವೈಷ್ಣವ್ ಕಾಲೇಜು ದಿನಗಳಿಂದ ಪರಿಚಯಸ್ಥರಾಗಿದ್ದು, ಮೂರು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದರು. ಖಾಸಗಿ ಕಂಪನಿಯೊಂದರ ಮಾರುಕಟ್ಟೆ ವಿಭಾಗದಲ್ಲಿ ಇಬ್ಬರು ಕೆಲಸ ಮಾಡುತ್ತಿದ್ದರು. ಈ ವೇಳೆ ಇಬ್ಬರ ನಡುವೆ ಪ್ರೇಮಾಂಕುರವಾಗಿದೆ. ಹೀಗಾಗಿ ಎರಡೂವರೆ ವರ್ಷಗಳಿಂದ ಸಹ ಜೀವನ ನಡೆಸುತ್ತಿದ್ದು, ಒಂದು ವರ್ಷದಿಂದ ಬೇಗೂರಿನ ನ್ಯೂಮೈಕೋ ಲೇಔಟ್‌ನಲ್ಲಿ ಬಾಡಿಗೆ ಮನೆಯಲ್ಲಿ ಒಟ್ಟಿಗೆ ವಾಸವಾಗಿದ್ದರು. ಈ ವಿಚಾರ ಇಬ್ಬರ ಪಾಲಕರಿಗೂ ತಿಳಿದಿತ್ತು. ಮುಂದಿನ ವರ್ಷ ಮದುವೆ ಮಾಡಲು ಪಾಲಕರು ನಿರ್ಧರಿಸಿದ್ದರು ಎಂಬುದು ಗೊತ್ತಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವರ್ಕ್ ಫ್ರಮ್ ಹೋಮ್ ಮಾಡುತ್ತಿದ್ದರಿಂದ ಇಬ್ಬರು ಮನೆಯಲ್ಲೇ ಇದ್ದರು. ಈ ನಡುವೆ ದೇವಿ, ವೈಷ್ಣವ್‌ನಿಂದ ಅಂತರ ಕಾಯ್ದುಕೊಳ್ಳಲು ಆರಂಭಿಸಿದ್ದಾಳೆ. ಅದೇ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು. ಅಲ್ಲದೆ, ‘ನೀನು ಬೇರೊಬ್ಬ ಯುವಕನ ಜತೆ ಎಗೆಂಜ್ ಆಗಿರುವೆ, ಹೀಗಾಗಿ ನನ್ನನ್ನು ದೂರು ಮಾಡುತ್ತಿರುವೆ’ ಎಂದು ಜಗಳ ಮಾಡುತ್ತಿದ್ದ. ಆದರೆ, ದೇವಿ, ವೈಷ್ಣವ್‌ನ ಮಾತನ್ನು ನಿರ್ಲಕ್ಷಿಸಿದ್ದಳು. ಶನಿವಾರ ಸಂಜೆ ೫ ಗಂಟೆ ಸುಮಾರಿಗೆ ಇಬ್ಬರ ನಡುವೆ ಇದೇ ವಿಚಾರಕ್ಕೆ ಮತ್ತೆ ಜಗಳವಾಗಿದೆ. ಅದು ವಿಕೋಪಕ್ಕೆ ಹೋದಾಗ, ವೈಷ್ಣವ್ ಅಡುಗೆ ಕೋಣೆಯಲ್ಲಿದ್ದ ಕುಕ್ಕರ್‌ನಿಂದ ದೇವಿ ತಲೆಗೆ ಜೋರಾಗಿ ಹೊಡೆದಿದ್ದಾನೆ. ಆಕೆಯ ತಲೆಗೆ ಗಂಭೀರ ಪೆಟ್ಟು ತೀವ್ರ ರಕ್ತಸ್ರಾವವಾಗಿ ಕುಸಿದು ಬಿದ್ದು ಮೃತಪಟ್ಟಿದ್ದಾಳೆ. ಗಾಬರಿಗೊಂಡ ಆರೋಪಿ, ಆಕೆಯನ್ನು ಎಚ್ಚರಿಸಲು ಯತ್ನಿಸಿದ್ದಾನೆ. ಆದರೆ, ಆಕೆ ಮೃತಪಟ್ಟಿದ್ದಾಳೆ ಎಂದು ದೃಢವಾಗುತ್ತಿದ್ದಂತೆ ಸ್ಥಳದಿಂದ ಪರಾರಿಯಾಗಿದ್ದ. ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದವರಿಗೆ ಹಸ್ತಾಂತರಿಸಿದ್ದಾರೆ. ಭಾನುವಾರ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬೇಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತು ವೈಷ್ಣವ್ ಕಾಲೇಜು ದಿನಗಳಿಂದ ಪರಿಚಯಸ್ಥರಾಗಿದ್ದು, ಮೂರು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದರು. ಖಾಸಗಿ ಕಂಪನಿಯೊಂದರ ಮಾರುಕಟ್ಟೆ ವಿಭಾಗದಲ್ಲಿ ಇಬ್ಬರು ಕೆಲಸ ಮಾಡುತ್ತಿದ್ದರು. ಈ ವೇಳೆ ಇಬ್ಬರ ನಡುವೆ ಪ್ರೇಮಾಂಕುರವಾಗಿದೆ. ಹೀಗಾಗಿ ಎರಡೂವರೆ ವರ್ಷಗಳಿಂದ ಸಹ ಜೀವನ ನಡೆಸುತ್ತಿದ್ದು, ಒಂದು ವರ್ಷದಿಂದ ಬೇಗೂರಿನ ನ್ಯೂಮೈಕೋ ಲೇಔಟ್‌ನಲ್ಲಿ ಬಾಡಿಗೆ ಮನೆಯಲ್ಲಿ ಒಟ್ಟಿಗೆ ವಾಸವಾಗಿದ್ದರು. ಈ ವಿಚಾರ ಇಬ್ಬರ ಪಾಲಕರಿಗೂ ತಿಳಿದಿತ್ತು. ಮುಂದಿನ ವರ್ಷ ಮದುವೆ ಮಾಡಲು ಪಾಲಕರು ನಿರ್ಧರಿಸಿದ್ದರು ಎಂಬುದು ಗೊತ್ತಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೇರೊಬ್ಬ ಯುವಕನ ಜತೆ ಎಗೆಂಜ್ ಆಗಿರುವೆ:
ವರ್ಕ್ ಫ್ರಮ್ ಹೋಮ್ ಮಾಡುತ್ತಿದ್ದರಿಂದ ಇಬ್ಬರು ಮನೆಯಲ್ಲೇ ಇದ್ದರು. ಈ ನಡುವೆ ದೇವಿ, ವೈಷ್ಣವ್‌ನಿಂದ ಅಂತರ ಕಾಯ್ದುಕೊಳ್ಳಲು ಆರಂಭಿಸಿದ್ದಾಳೆ. ಅದೇ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು. ಅಲ್ಲದೆ, ‘ನೀನು ಬೇರೊಬ್ಬ ಯುವಕನ ಜತೆ ಎಗೆಂಜ್ ಆಗಿರುವೆ, ಹೀಗಾಗಿ ನನ್ನನ್ನು ದೂರು ಮಾಡುತ್ತಿರುವೆ’ ಎಂದು ಜಗಳ ಮಾಡುತ್ತಿದ್ದ. ಆದರೆ, ದೇವಿ, ವೈಷ್ಣವ್‌ನ ಮಾತನ್ನು ನಿರ್ಲಕ್ಷಿಸಿದ್ದಳು. ಶನಿವಾರ ಸಂಜೆ ೫ ಗಂಟೆ ಸುಮಾರಿಗೆ ಇಬ್ಬರ ನಡುವೆ ಇದೇ ವಿಚಾರಕ್ಕೆ ಮತ್ತೆ ಜಗಳವಾಗಿದೆ. ಅದು ವಿಕೋಪಕ್ಕೆ ಹೋದಾಗ, ವೈಷ್ಣವ್ ಅಡುಗೆ ಕೋಣೆಯಲ್ಲಿದ್ದ ಕುಕ್ಕರ್‌ನಿಂದ ದೇವಿ ತಲೆಗೆ ಜೋರಾಗಿ ಹೊಡೆದಿದ್ದಾನೆ. ಆಕೆಯ ತಲೆಗೆ ಗಂಭೀರ ಪೆಟ್ಟು ತೀವ್ರ ರಕ್ತಸ್ರಾವವಾಗಿ ಕುಸಿದು ಬಿದ್ದು ಮೃತಪಟ್ಟಿದ್ದಾಳೆ. ಗಾಬರಿಗೊಂಡ ಆರೋಪಿ, ಆಕೆಯನ್ನು ಎಚ್ಚರಿಸಲು ಯತ್ನಿಸಿದ್ದಾನೆ. ಆದರೆ, ಆಕೆ ಮೃತಪಟ್ಟಿದ್ದಾಳೆ ಎಂದು ದೃಢವಾಗುತ್ತಿದ್ದಂತೆ ಸ್ಥಳದಿಂದ ಪರಾರಿಯಾಗಿದ್ದ. ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದವರಿಗೆ ಹಸ್ತಾಂತರಿಸಿದ್ದಾರೆ. ಭಾನುವಾರ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬೇಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.