ನ್ಯೂಸ್

ಚಲಿಸುತ್ತಿದ್ದ ಆಟೋದಲ್ಲಿ ಮಹಿಳೆ ಎದುರು ಹಸ್ತಮೈಥುನ ಮಾಡಿಕೊಂಡ ದುರುಳ!

ಪುಣೆ: ಚಲಿಸುತ್ತಿದ್ದ ಆಟೋದಲ್ಲಿ ಸಹ ಪ್ರಯಾಣಿಕಳಾಗಿದ್ದ 40 ವರ್ಷದ ಮಹಿಳೆ ಎದುರೇ ವ್ಯಕ್ತಿಯೊಬ್ಬ ಹಸ್ತಮೈಥುನ ಮಾಡಿಕೊಂಡ ವಿಲಕ್ಷಣ ಘಟನೆ ಪುಣೆ ಜಿಲ್ಲೆಯ ಪಿಂಪ್ರಿ ಚಿಂಚವಾಡದಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಕಳೆದ ಶನಿವಾರ ಆ ಮಹಿಳೆ ತನ್ನ ಮಗುವನ್ನು ಕರೆದುಕೊಂಡು ಯಶವಂತರಾವ್ ಚೌಹಾಣ್ ಮೆಮೋರಿಯಲ್ ಆಸ್ಪತ್ರೆಗೆ ಹೋಗುವಾಗ ಈ ಘಟನೆ ನಡೆದಿದೆ.

ಘಟನೆಗೆ ಸಂಬಂಧಿಸಿದಂತೆ 35 ವರ್ಷದ ಶೊಯೇಬ್ ಖುರೇಶಿ ಎನ್ನುವನನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ. ಈತ ಆಟೋದಲ್ಲಿ ಮಹಿಳೆಯನ್ನು ನೋಡಿ ಹಸ್ತಮೈಥುನ ಮಾಡಿಕೊಂಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾಳೆ.

ಮಹಿಳೆಯರ ಘನತೆ ಎತ್ತಿ ಹಿಡಿಯುವಲ್ಲಿ ಸರ್ಕಾರ ಕಠಿಣ ಕಾನೂನುಗಳನ್ನು ರೂಪಿಸಿದರೂ ಆಗಾಗ ಇಂತಹ ಕೆಟ್ಟ ಘಟನೆಗಳು ವರದಿಯಾಗುತ್ತಲೇ ಇವೆ. ಇತ್ತೀಚೆಗೆ ಉತ್ತರ ಪ್ರದೇಶದ ಆಸ್ಪತ್ರೆಯೊಂದರಲ್ಲಿ ಕೂಡ ಸರದಿ ಸಾಲಿನಲ್ಲಿ ನಿಂತಿದ್ದ ಮಹಿಳೆಯನ್ನು ನೋಡಿ ವ್ಯಕ್ತಿಯೊಬ್ಬ ಹಸ್ತಮೈಥುನ ಮಾಡಿಕೊಂಡಿದ್ದ. (ಏಜೇನ್ಸಿಸ್).