ಥಾಣೆ: ಮಾಲ್ ಒಂದರಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮುಂಬೈನ ಥಾಣೆಯಲ್ಲಿ ನಡೆದಿದೆ.
ಇಂದು ಮಧ್ಯಾಹ್ನದ ಹೊತ್ತಿಗೆ ಥಾಣೆಯ ಕಪುರಬವ್ಡಿ ನಗರದಲ್ಲಿರುವ ಲೇಕ್ ಮಾಲ್ನ ಮೊದಲನೇ ಫ್ಲೋರ್ನಲ್ಲಿ ಇದ್ದಕ್ಕಿದ್ದಂಗೆ ಬೆಂಕಿ ಹೊತ್ತಿಕೊಂಡು ಉರಿಯಲಾರಂಭಿಸಿದೆ. ಈ ಮಾಲ್ ಬಾಲ್ಕಮ್ ಅಗ್ನಿ ಶಾಮಕ ಕೇಂದ್ರದ ಹತ್ತಿರವಿದ್ದು ಬೆಂಕಿ ಕಾಣಿಸಿಕೊಂಡಿರುವುದು ತಿಳಿದ ತಕ್ಷಣವೇ ಅಗ್ನಿಶಾಮಕ ದಳವು ಸ್ಥಳಕ್ಕೆ ಆಗಮಿಸಿದ್ದು ಬೆಂಕಿ ನಂದಿಸುವ ಪ್ರಯತ್ನವನ್ನು ನಡೆಸುತ್ತಿದೆ.
ಬೆಂಕಿ ಅನಾಹುತಕ್ಕೆ ಕಾರಣವೇನು ಎನ್ನುವುದು ತಿಳಿದುಬಂದಿಲ್ಲ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ ಎನ್ನುವುದು ತಿಳಿದು ಬಂದಿದೆ. ಕೆಲ ದಿನಗಳ ಹಿಂದೆ ಗುಜರಾತ್ನ ಅಹಮದಾಬಾದ್ನ ನರೋಲ್ ಎಂಬ ನಗರದಲ್ಲಿ ಬಟ್ಟೆ ಕಾರ್ಖಾನೆ ಹೊತ್ತಿ ಉರಿದಿದ್ದು ನಾಲ್ಕು ಜನರು ಸ್ಥಳದಲ್ಲೇ ಮೃತಪಟ್ಟಿದ್ದರು. (ಏಜೆನ್ಸೀಸ್)