ಬೆಂಗಳೂರು: ನಿಗಮ ಮಂಡಳಿ ನೇಮಕ ನಿಧಾನಗತಿ ಧೋರಣೆ, ವರ್ತನೆ ಬದಲಿಸಿಕೊಳ್ಳದ ಸಚಿವರ ಕುರಿತು ಬೇಸರಗೊಂದ ಕಾಂಗ್ರೆಸ್‌ನ ಕೆಲವು ಮುಖಂಡರು ಶುಕ್ರವಾರ ಕೆಪಿಸಿಸಿ ಕಚೇರಿ ಸಮೀಪದ ಕ್ಲಬ್‌ನಲ್ಲಿ ಸಭೆ ನಡೆಸಿದ್ದಾರೆ.
ನಿಗಮ-ಮಂಡಳಿಯಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರಿಗೆ ಆದ್ಯತೆ ನೀಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಶಾಸಕರಿಗೆ ನಿಗಮ ಮಂಡಳಿಯಲ್ಲಿ ಅವಕಾಶ ನೀಡುವುದಾದರೆ ಚುನಾವಣೆ ಸಂದರ್ಭದಲ್ಲಿ ದುಡಿದ ಕಾರ್ಯಕರ್ತರ ಏನು ಮಾಡಬೇಕು? ಎಲ್ಲಾ ಅಧಿಕಾರವನ್ನು ಶಾಸಕರು, ಸಚಿವರು ಅನುಭವಿಸಿದರೆ ಹೇಗೆ? ಸುಮ್ಮನೆ ಇದ್ದರೆ ಆಗಲ್ಲ ಎಂದು ಕೆಲವರು ಸಿಡಿಮಿಡಿಗೊಂಡರೆಂದು ತಿಳಿದುಬಂದಿದೆ.
ಇನ್ನೂ ಕೆಲವರು ಸಚಿವರ ವಿರುದ್ಧವೂ ಬೇಸರ ವ್ಯಕ್ತಪಡಿಸಿದರು. ಮನವಿ ಪತ್ರ ಹಿಡಿದು ಹೋದರೆ ಸ್ಪಂದಿಸುತ್ತಿಲ್ಲ ಎಂದು ಬೇಸರಿಸಿದರು.