ಬೆಂಗಳೂರು: ಜೆಡಿಎಸ್ ಕಾರ್ಮಿಕ ವಿಭಾಗದ ರಾಜ್ಯ ಪದಾಧಿಕಾರಿಗಳು ಹಾಗೂ ಜಿಲ್ಲಾಧ್ಯಕ್ಷರ ಸಭೆಯನ್ನು ಮಂಗಳವಾರ ಬೆಳಗ್ಗೆ 11ಕ್ಕೆ ಜೆ.ಪಿ.ಭವನದಲ್ಲಿ ಕರೆಯಲಾಗಿದೆ.
ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಜಿ.ಶ್ರೀರಾಮಯ್ಯ ಅಧ್ಯಕ್ಷತೆ ವಹಿಸುವರು. ಪಕ್ಷದ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ವೆಂಕಟರಾ ನಾಡಗೌಡ, ವಿಧಾನ ಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ, ರಾಜ್ಯ ಮಹಿಳಾ ವಿಭಾಗದ ಅಧ್ಯಕ್ಷೆ ರಶ್ಮಿ ರಾಮೇಗೌಡ, ಡಾ.ಕೆ.ಸಿ.ರಾಜಣ್ಣ ಹಾಗೂ ವಿವಿಧ ಘಟಕಗಳ ರಾಜ್ಯಾಧ್ಯಕ್ಷರು ಭಾಗವಹಿಸಲಿದ್ದಾರೆ.