KSEshwarappa 
ನ್ಯೂಸ್

ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಈಶ್ವರಪ್ಪ ಅಭಿಮಾನಿ

ಶಿವಮೊಗ್ಗ: ಕೆ.ಎಸ್.ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ ಬೆನ್ನಲ್ಲೇ ಅವರ ಅಭಿಮಾನಿಯೊಬ್ಬ ಗುಂಡಪ್ಪಶೆಡ್‌ನ ಸಚಿವರ ಮನೆ ಮುಂದೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಮುರುಗಾ ಎಂಬಾತ ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ. ಗುರುವಾರ ರಾತ್ರಿ ಸಚಿವರ ಮನೆ ಬಳಿ ತೆರಳಿದ ಸಚಿವರ ಅಭಿಮಾನಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ಮತ್ತು ಜನ ರಕ್ಷಣೆ ಮಾಡಿದ್ದಾರೆ. ವಿಷಯ ತಿಳಿದು ಮನೆಯಿಂದ ಹೊರಗೆ ಬಂದ ಸಚಿವ ಈಶ್ವರಪ್ಪ ಅವರು ಅಭಿಮಾನಿಗೆ ಬುದ್ಧಿ ಹೇಳಿ ಕಳುಹಿಸಿದರು.