ನ್ಯೂಸ್

LIVE| ಗರಿ ಬಿಚ್ಚಿದೆ ಮೈಸೂರು ದಸರಾ ಮಹೋತ್ಸವ ಸಡಗರದ ಅಂಕದ ಪರದೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಸಡಗರದ ಅಂಕದ ಪರದೆ ಸೋಮವಾರ ಗರಿ ಬಿಚ್ಚಿದೆ. ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿಯ ಸನ್ನಿಧಿಯಲ್ಲಿ ದಸರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ವಿಧ್ಯುಕ್ತ ಚಾಲನೆ ಸಿಕ್ಕಿದೆ. ದೇಶದ ಪ್ರಥಮ ಪ್ರಜೆಯಿಂದ ಉದ್ಘಾಟನೆ ಆಗುತ್ತಿರುವುದು ಇದೇ ಮೊದಲು. ಸಾಲು ಸಾಲು ದಸರಾ ಚಟುವಟಿಕೆಗಳು ಅನಾವರಣಗೊಳ್ಳಲಿದೆ.