ಬೆಂಗಳೂರು: ಮೆಟ್ರೋ ಪ್ರಯಾಣಿಕರೇ ಇತ್ತ ಗಮನಿಸಿ, ರಾಜ್ಯ ರಾಜ್ಯಧಾನಿ ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಆಗಲಿದೆ.
ನಾಯಂಡನಳ್ಳಿ-ಕೆಂಗೇರಿ ಮಾರ್ಗದಲ್ಲಿ ಕಾಮಗಾರಿ ನಡೆಯುತ್ತಿದ್ದು, ಆ.11 ಮತ್ತು 12ರಂದು ವಿಜಯನಗರ-ಮೈಸೂರು ರಸ್ತೆಯಲ್ಲಿ ಮೆಟ್ರೋ ಸಂಚಾರ ಸ್ಥಗಿತಗೊಂಡಿದೆ. ಮೆಟ್ರೋ ಸಂಚಾರ ವ್ಯತ್ಯಯದ ಬಗ್ಗೆ ಬಿಎಂಆರ್ಸಿಎಲ್ನಿಂದ ಮಾಹಿತಿ ಬಂದಿದ್ದು, ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ಇಂದು ಮತ್ತು ನಾಳೆ ವ್ಯತ್ಯಯ ಉಂಟಾಗಲಿದೆ.