ನವದೆಹಲಿ: ಪಂಜಾಬ್‌ನ ಖ್ಯಾತ ಗಾಯಕ, ಕಾಂಗ್ರೆಸ್ ನಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ಐಎ(ರಾಷ್ಟ್ರೀಯ ತನಿಖಾ ಸಂಸ್ಥೆ) ಅಧಿಕಾರಿಗಳು ಗ್ಯಾಂಗ್ಸ್ಟರ್ಗಳಾದ ಕಲಾ ರಾಣಾ ಮತ್ತು ವಿನಯ್ ದೇವ್ರಾ ನಿವಾಸಗಳ ಮೇಲೆ ಸೋಮವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ಸಿಧು ಮೂಸೆವಾಲಾ ಹತ್ಯೆಯಲ್ಲಿ ಶಂಕಿತ ಭಯೋತ್ಪಾದಕ ಗುಂಪುಗಳಿಗೆ ಸಂಬಂಧಿಸಿದಂತೆ ದೆಹಲಿ-ಎನ್‌ಸಿಆರ್, ಹರಿಯಾಣ ಮತ್ತು ಪಂಜಾಬ್ ಸೇರಿ ದೇಶದ ಹಲವೆಡೆ 60 ಕಡೆ ಎನ್‌ಐಎ ದಾಳಿ ನಡೆಸಿದೆ. ಹರಿಯಾಣದ ಯಮುನಾನಗರದಲ್ಲಿರುವ ಗ್ಯಾಂಗ್‌ಸ್ಟರ್ ಕಲಾ ರಾಣಾ ನಿವಾಸ ಮತ್ತು ಪಂಜಾಬ್‌ನ ಫರೀದ್‌ಕೋಟ್‌ನಲ್ಲಿರುವ ಗ್ಯಾಂಗ್‌ಸ್ಟರ್ ವಿನಯ್ ದೇವ್ರಾ ಅವರ ನಿವಾಸದ ಮೇಲೆ ಎನ್‌ಐಎ ದಾಳಿ ನಡೆಸಿದೆ.
2022ರ ಮೇ 29ರಂದು ಸಿಧು ಮೂಸೆವಾಲಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿರುವ ಎನ್‌ಐಎ, ಇಂದು ಬೆಳ್ಳಂಬೆಳಗ್ಗೆ ದೇಶಾದ್ಯಂತ 60ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ನಡೆಸಿದೆ. ಸಿಧು ಹತ್ಯೆ ಪ್ರಕರಣದಲ್ಲಿ ಭೂಗತ ಲೋಕದ ಕೈವಾಡದ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ.