ನ್ಯೂಸ್

ರಾಮನಗರಕ್ಕೆ ಎರಡು ಆಂಬುಲೆನ್ಸ್ ಕೊಡುಗೆ ಕೊಟ್ಟ ನಿಖಿಲ್ ಕುಮಾರಸ್ವಾಮಿ

ರಾಮನಗರ: ಕರೊನಾ ಸಂಕಷ್ಟ ಕಾಲದಲ್ಲಿ ರಾಮನಗರ ಜನರ ಅನುಕೂಲಕ್ಕಾಗಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಎರಡು ಆಂಬುಲೆನ್ಸ್​ ಅನ್ನು ಜಿಲ್ಲೆಗೆ ಕೊಡುಗೆ ನೀಡಿದ್ದಾರೆ.

ಜಿಲ್ಲಾ ವೈದ್ಯಾಧಿಕಾರಿಗಳ ಕಚೇರಿ ಆವರಣದಲ್ಲಿ ಇಂದು(ಮಂಗಳವಾರ) ಆಂಬುಲೆನ್ಸ್​ಗಳನ್ನು ಆರೋಗ್ಯ ಇಲಾಖೆಗೆ ಹಸ್ತಾಂತರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಕೊವೀಡ್ ಎರಡನೇ ಅಲೆ ಹೆಚ್ಚಾಗಿದೆ, ಸಾವು-ನೋವಿನ ಪ್ರಮಾಣ ಹೆಚ್ಚಾಗಿದೆ. ಭಾನುವಾರ ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಅಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದರು. ಈ ವೇಳೆ ಅಧಿಕಾರಿಗಳು ರಾಮನಗರ ತಾಲೂಕಿನಲ್ಲಿ ಆಂಬುಲೆನ್ಸ್ ಕೊರತೆ ಇರುವುದಾಗಿ ತಿಳಿಸಿದ್ದರು. ಹಾಗಾಗಿ ರಾಮನಗರಕ್ಕೆ ಎರಡು ಆಂಬುಲೆನ್ಸ್ ವ್ಯವಸ್ಥೆ ಮಾಡಿದ್ದೇವೆ. ಊಟದ ಸಮಸ್ಯೆ ಎದುರಾಗಿದೆ ಎಂಬುದು ನಮ್ಮ ಗಮನಕ್ಕೆ ಬಂದಿದೆ. ಅದಕ್ಕೂ ಸೂಕ್ತ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು. ಇದನ್ನೂ ಓದಿರಿ ಸ್ವಾಭಿಮಾನಿ ಗೆಲುವಿಗೆ 2 ವರ್ಷ: ಸುಮಲತಾ ವಿರುದ್ಧ ಸಾರ್ವಜನಿಕರ ಆಕ್ರೋಶ..!