ನ್ಯೂಸ್

ಚಾಮರಾಜನಗರದಲ್ಲಿ ಸತ್ತದ್ದು 24 ಅಲ್ಲ, 34 ಮಂದಿ! ಅಧಿಕಾರಿಗಳು ಮಾಹಿತಿ ಮುಚ್ಚಿಟ್ಟಿದ್ದಾರೆ...

ಚಾಮರಾಜನಗರ: ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್​ ಕೊರತೆಯಿಂದ ಸತ್ತದ್ದು 24 ರೋಗಿಗಳಲ್ಲ, 34 ಜನ. ಅಧಿಕಾರಿಗಳು ಸತ್ಯ ಮುಚ್ಚಿಟ್ಟಿದ್ದಾರೆ. ಖಚಿತ ಮಾಹಿತಿಯನ್ನು ಕೊಟ್ಟಿಲ್ಲ ಎಂದು ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಗಂಭೀರ ಆರೋಪ ಮಾಡಿದ್ದಾರೆ.

ಆರೋಗ್ಯ ಸಚಿವರು ಕೇವಲ ಮೂರು ಮಂದಿ ಎಂದು ಸುಳ್ಳು ಮಾಹಿತಿ ನೀಡುತ್ತಿದ್ದಾರೆ. 24 ಮಂದಿ ಹೊರತುಪಡಿಸಿ ಉಳಿದ 10 ಮಂದಿಯ ಹೆಸರು ಪಟ್ಟಿಯಲ್ಲಿ ಇಲ್ಲ. ಅಧಿಕಾರಿಗಳು ಸಚಿವರಿಗೆ ಸರಿಯಾದ ಮಾಹಿತಿ ನೀಡಿಲ್ಲ. ಈ ಘೋರ ದುರಂತದ ಬಗ್ಗೆ ಉನ್ನತಮಟ್ಟದಲ್ಲಿ ತನಿಖೆ ಆಗಬೇಕು. ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಸತ್ತವರ ಕುಟಂಬಗಳಿಗೆ ಪರಿಹಾರ ನೀಡಬೇಕು ಎಂದು ಶಾಸಕರು ಆಗ್ರಹಿಸಿದ್ದಾರೆ. ಇದನ್ನೂ ಓದಿರಿ ಈ ಸರ್ಕಾರವನ್ನ ನಂಬಿದ್ರೆ ನಮ್ಮೆಲ್ಲರ ತಿಥಿ ಆಗುತ್ತೆ, ಬರೆದಿಟ್ಟುಕೊಳ್ಳಿ: ಸಿಎಂ ವಿರುದ್ಧ ಏಕವಚನದಲ್ಲೇ ಶಾಸಕ ವಾಗ್ದಾಳಿ

ಭಾನುವಾರ ರಾತ್ರಿ ಆಕ್ಸಿಜನ್​ ಕೊರತೆಯಿಂದ ಚಾಮರಾಜನಗರ ಆಸ್ಪತ್ರೆಯಲ್ಲಿ 20ಕ್ಕೂ ಹೆಚ್ಚು ಕರೊನಾ ಸೋಂಕಿತರು ಸತ್ತಿದ್ದಾರೆ. 2 ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಯುವಕನೂ ಮೃತಪಟ್ಟಿದ್ದಾನೆ. ಈ ಘಟನೆ ಇಡೀ ರಾಜ್ಯವನ್ನೇ ತಲ್ಲಣಗೊಳಿಸಿದೆ. ಇತ್ತ ಪ್ರತಿಷ್ಠೆಗೆ ಅಮಾಯಕರು ಬಲಿಯಾಗಿದ್ದಾರೆ ಎಂಬ ಆರೋಪವೂ ಕೇಳಿ ಬಂದಿದೆ.

ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್​ ಕೊರತೆಯಿಂದ 34ರಿಂದ 35 ಜನ ಸತ್ತಿದ್ದಾರೆ. ಸಚಿವರು 24 ಜನ ಸತ್ತಿದ್ದಾರೆ ಅಂತಾ ಸುಳ್ಳು ಮಾಹಿತಿ ಕೊಡ್ತಿದ್ದಾರೆ. ಸತ್ತವರಿಗೆ ನ್ಯಾಯ ಸಿಗಬೇಕಾದ್ರೆ ನ್ಯಾಯಾಂಗ ತನಿಖೆ ಮಾಡಲಿ ಎಂದು ಕಾಂಗ್ರೆಸ್ ಶಾಸಕ ನರೇಂದ್ರ ಆಗ್ರಹಿಸಿದ್ದಾರೆ.

ಭಾನುವಾರ ರಾತ್ರಿ ಆಕ್ಸಿಜನ್​ ಕೊರತೆಯಿಂದ ಚಾಮರಾಜನಗರ ಆಸ್ಪತ್ರೆಯಲ್ಲಿ 20ಕ್ಕೂ ಹೆಚ್ಚು ಕರೊನಾ ಸೋಂಕಿತರು ಸತ್ತಿದ್ದಾರೆ. 2 ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಯುವಕನೂ ಮೃತಪಟ್ಟಿದ್ದಾನೆ. ಈ ಘಟನೆ ಇಡೀ ರಾಜ್ಯವನ್ನೇ ತಲ್ಲಣಗೊಳಿಸಿದೆ.