ನ್ಯೂಸ್

ನಡು ರಸ್ತೆಯಲ್ಲಿ ಯುವಕನನ್ನು ಹತ್ಯೆಗೈದ ಹಂತಕರು; ಪ್ರೀತಿಸಿ ವಿವಾಹವಾಗಿದ್ದೇ ಜೀವ ತೆಗೆಯಲು ಕಾರಣವಾ?

ತಮಿಳುನಾಡು: ಹಾಡು ಹಗಲೇ ನಡು ರಸ್ತೆಯಲ್ಲಿ ಅಟ್ಟಾಡಿಸಿಕೊಂಡು ಹೋಗಿ ಯುವಕನೊಬ್ಬನನ್ನು ಕೊಚ್ಚಿ ಕೊಂದಿರುವ ಘಟನೆ ಕೃಷ್ಣಗಿರಿ ಡ್ಯಾಂ ಬಳಿಯ ಕಾವೇರಿಪಟ್ಟಣಂ ಎಂಬಲ್ಲಿ ನಡೆದಿದೆ. ಗುಂಪೊಂದು ಹತ್ಯೆ ಮಾಡುತ್ತಿರುವ ದೃಶ್ಯ ಸ್ಥಳೀಯರ ಮೊಬೈಲ್​ನಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಕೊಲೆಯಾದ ಯುವಕ ಇತ್ತೀಚೆಗೆ ಯುವತಿಯೊಬ್ಬಳನ್ನು ಪ್ರೀತಿಸಿ ವಿವಾಹವಾಗಿದ್ದ. ಇದೀಗ ಮೂವರು ಯುವಕರ ತಂಡ ಸರ್ವೀಸ್ ರಸ್ತೆಯಲ್ಲಿ ಅಡ್ಡಗಟ್ಟಿ ತಲ್ವಾರ್​ನಿಂದ ದಾಳಿ ಮಾಡಿದ್ದಾರೆ. ಯುವಕನ ಎದೆ ಹಾಗೂ ತಲೆಯ ಭಾಗಕ್ಕೆ ತಲ್ವಾರ್​ನಿಂದ ಕೊಚ್ಚಿ ಕೊಂದಿದ್ದಾರೆ.

ಪ್ರೀತಿಸಿ ವಿವಾಹವಾದ ಹಿನ್ನೆಲೆಯಲ್ಲಿ ಯುವತಿಯ ಕಡೆಯವರೇ ಕೊಲೆ ಮಾಡಿರುವ ಸಾಧ್ಯತೆ ಇದೆ ಎಂದು ಮೇಲ್ನೋಟಕ್ಕೆ ಅಂದಾಜಿಸಲಾಗಿದೆ. ಘಟನಾ ಸ್ಥಳಕ್ಕೆ ಕಾವೇರಿಪಟ್ಟಣಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರ ತನಿಖೆಯಿಂದ ಯುವಕನ ಕೊಲೆಗೆ ಕಾರಣವೇನು ಎಂಬ ಪ್ರಶ್ನೆಗೆ ಉತ್ತರ ಸಿಗಬೇಕಿದೆ. ಒಟ್ಟಾರೆ ಹಾಡಹಗಲೇ ನಡುರಸ್ತೆಯಲ್ಲಿ ಕೊಲೆ ನಡೆದಿರುವುದನ್ನು ಕಂಡ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಇದನ್ನೂ ಓದಿ: ಹಿಂದುತ್ವದ ಬಗ್ಗೆ ಅವಹೇಳನ; ನಟ ಚೇತನ್ ಬಂಧನ