ನ್ಯೂಸ್

ಜುಲೈ 2ನೇ ವಾರದಲ್ಲಿ ಪಿಯು ರಿಸಲ್ಟ್ ಪ್ರಕಟ: ಜು.19 ಮತ್ತು 22ರಂದು ಎಸ್ಸೆಸ್ಸೆಲ್ಸಿ ಎಕ್ಸಾಂ

ಬೆಂಗಳೂರು: ಜುಲೈ 19 ಮತ್ತು 22ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದೆ ಎಂದು ಸೋಮವಾರ ದಿನಾಂಕ ಪ್ರಕಟಿಸಿದ ಸುರೇಶ್​ ಕುಮಾರ್​, ಇದೇ ವೇಳೆ ದ್ವಿತೀಯ ಪಿಯು ಫಲಿತಾಂಶ ಪ್ರಕಟದ ದಿನಾಂಕವನ್ನೂ ತಿಳಿಸಿದರು.

ವಿಕಾಸಸೌಧದ ತಮ್ಮ ಕೊಠಡಿಯಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಣ ತಜ್ಞರ ಜತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಕೇವಲ ಎರಡು ದಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದೆ. ಜು.19ರಂದು ಕೋರ್ ಸಬ್ಜೆಕ್ಟ್ (ಗಣಿತ, ವಿಜ್ಞಾನ, ಸಮಾಜ ವಿಜ್ಞಾನ) ಹಾಗೂ ಜು.22ರಂದು ಭಾಷಾ ವಿಷಯಗಳ ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಿದರು. ಜುಲೈ 2ನೇ ವಾರದಲ್ಲಿ ದ್ವಿತೀಯ ಪಿಯು ಪಲಿತಾಂಶ ಪ್ರಕಟ ಆಗುತ್ತೆ. ಯಾರಿಗೂ ಅನ್ಯಾಯ ಆಗದ ರೀತಿಯಲ್ಲಿ ಒಂದು ಮಾನದಂಡದಲ್ಲಿ ಫಲಿತಾಂಶ ಕೊಡಲಾಗುವುದು. ಪರೀಕ್ಷೆ ಬರೆಯಲು ಇಚ್ಛಿಸುವವರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.