ನ್ಯೂಸ್

'ಪುನೀತ ನಮನ'ಕ್ಕೆ ಪ್ರವೇಶ ಸಿಕ್ಕಿಲ್ಲವೆಂದು ಬೇಸರ ಬೇಡ: ಅಭಿಮಾನಿಗಳಿಗಾಗೇ ಮತ್ತೊಂದು ​ಕಾರ್ಯಕ್ರಮ

arunakunigal

ಬೆಂಗಳೂರು: ನಟ ಪುನೀತ್ ರಾಜಕುಮಾರ್ ಅವರ ಸ್ಮರಣಾರ್ಥ ಇಂದು(ನ.16) ಅರಮನೆ ಮೈದಾನದಲ್ಲಿ ನಡೆಯುವ ‘ಪುನೀತ್ ನಮನ’ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಪ್ರವೇಶ ಇಲ್ಲ. 'ಪುನೀತ ನಮನ'ದಲ್ಲಿ ಪಾಲ್ಗೊಳ್ಳಲು ಅವಕಾಶ ಸಿಗದೆ ಬೇಸರಗೊಂಡಿರುವ ಅಭಿಮಾನಿಗಳಿಗೆಂದೇ ಪ್ರತ್ಯೇಕವಾಗಿ ಕಾರ್ಯಕ್ರಮ ಆಯೋಜಿಸುವುದಾಗಿ ನಿರ್ಮಾಪಕ ಸಾರಾ ಗೋವಿಂದು ತಿಳಿಸಿದ್ದಾರೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ವತಿಯಿಂದ ಇಂದು ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಚಿತ್ರರಂಗದವರು ಮಾತ್ರ ಪಾಲ್ಗೊಳ್ಳಲಿದ್ದಾರೆ. ಸೀಮಿತ ಸಂಖ್ಯೆಯೊಂದಿಗೆ ಸರಳವಾಗಿ ಪುನೀತ್​ಗೆ ನಮನ ಸಲ್ಲಿಸಲು ಮಂಡಳಿ ಕಾರ್ಯಕ್ರಮ ಆಯೋಜಿಸಿದೆ. ಅವಕಾಶ ಸಿಕ್ಕಿಲ್ಲವೆಂದು ಜನರು ಬೇಸರ ಮಾಡಿಕೊಳ್ಳಬಾರದು. ಅಭಿಮಾನಿಗಳಿಗೆಂದೇ ಮತ್ತೊಂದು ಕಾರ್ಯಕ್ರಮವನ್ನು ಆಯೋಜಿಸುವ ಬಗ್ಗೆ ಚರ್ಚೆಯಾಗುತ್ತಿದೆ. ಬೆಂಗಳೂರು, ಹುಬ್ಬಳ್ಳಿ ಅಥವಾ ದಾವಣಗೆರೆಯಲ್ಲಿ ಮುಂದಿನ ತಿಂಗಳು ಡಾ.ರಾಜ್​ ಕುಟುಂಬದ ಅಭಿಮಾನಿಗಳಿಗಾಗಿಯೇ ಪ್ರತ್ಯೇಕ ಕಾರ್ಯಕ್ರಮ ಮಾಡಲಾಗವುದು ಎಂದು ಸಾರಾ ಗೋವಿಂದು ತಿಳಿಸಿದರು.