ನ್ಯೂಸ್

ಪಂಜಾಬ್​ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಹೀನಾಯ ಸೋಲು: ಸಿಎಂ ಸ್ಥಾನಕ್ಕೆ ಚನ್ನಿ ರಾಜೀನಾಮೆಗೆ ಕ್ಷಣಗಣನೆ

ಚಂಡಿಗಢ: ಪಂಜಾಬ್​ನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಹೀನಾಯ ಸೋಲುಂಡಿದ್ದು, ಸೋಲಿನ ಹೊಣೆ ಹೊತ್ತ ಸಿಎಂ ಚರಣ್‌ಜಿತ್‌ ಸಿಂಗ್‌ ಚನ್ನಿ ಕೆಲವೇ ನಿಮಿಷಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.

ರಾಜ್ಯಪಾಲ ಬನ್ವರಿಲಾಲ್‌ ಪುರೋಹಿತ್‌ ಅವರನ್ನು ಭೇಟಿ ಮಾಡಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ. ಪಂಜಾಬ್​ನಲ್ಲಿ ಇದೇ ಮೊದಲ ಬಾರಿಗೆ ಆಮ್​ ಆದ್ಮಿ ಪಾರ್ಟಿ ಅಧಿಕಾರದ ಗದ್ದುಗೆ ಏರಲಿದೆ. ಒಟ್ಟು 117 ಕ್ರೇತ್ರಗಳ ಪೈಕಿ ಎಎಪಿಗೆ 90 ಕ್ಷೇತ್ರಗಳಲ್ಲಿ ಮುನ್ನಡೆ ಸಿಕ್ಕಿದೆ. ಮ್ಯಾಜಿಕ್​ ನಂಬರ್​ 51 ಅನ್ನು ಈಗಾಗಲೇ ದಾಟಿರುವ ಎಎಪಿ, ಸರ್ಕಾರ ರಚಿಸುವುದು ಬಹುತೇಕ ಖಚಿತ.

ಎಎಪಿ ಸಿಎಂ ಅಭ್ಯರ್ಥಿ ಭಗವಾನ್‌ ಮಾನ್‌ ಮನೆ ಮುಂದೆ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ. ಅತ್ತ ಸೋಲಿನ ಹೊಣೆ ಹೊತ್ತ ಚನ್ನಿ, ಇನ್ನು ಕೆಲವೇ ಕ್ಷಣದಲ್ಲಿ ರಾಜೀನಾಮೆ ಕೊಡಲಿದ್ದಾರೆ.