ನ್ಯೂಸ್

ಮಾಜಿ ಎಂಎಲ್​ಸಿ ಎಸ್.ಎಂ.ಆನಂದ್ ನಿಧನ

ಹಾಸನ: ಜಿಲ್ಲೆಯ ಹಿರಿಯ ವಕೀಲ, ಕಾಂಗ್ರೆಸ್ ಮುಖಂಡ, ಮಾಜಿ ವಿಧಾನಪರಿಷತ್ ಸದಸ್ಯ ಎಸ್.ಎಂ.ಆನಂದ್(75) ಭಾನುವಾರ ಬೆಳಗ್ಗೆ ಬೆಂಗಳೂರಿನಲ್ಲಿ ನಿಧನರಾದರು.

ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಇವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಒಂದು ಬಾರಿ (2004-2010)ವಿಧಾನ ಪರಿಷತ್ ಸದಸ್ಯರಾಗಿದ್ದ ಇವರು, 1996ರಲ್ಲಿ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು.

ಒಂದು ಅವಧಿಗೆ ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಎಸ್​.ಎಂ.ಆನಂದ್​ ಅವರು ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅವಧಿಯಲ್ಲಿ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷರಾಗಿದ್ದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ, ಸದಸ್ಯರಾಗಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷ ಸಂಘಟನೆಗೆ 4 ದಶಕಗಳಿಂದ ತೊಡಗಿಸಿಕೊಂಡಿದ್ದರು.

ಪಾರ್ಥೀವ ಶರೀರವನ್ನು ನಗರದ ಇವರ ಸ್ವಗೃಹದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು. ಇವರಿಗೆ ಪತ್ನಿ ಇದ್ದಾರೆ. ಸಂಜೆ ಬಿಟ್ಟಗೌಡನಹಳ್ಳಿ ಶಾಂತಿಧಾಮದಲ್ಲಿ ಅಂತ್ಯಕ್ರಿಯೆ ನೆರವೇರಿತು.