ನ್ಯೂಸ್

ಜಿಟಿ ಜಿಟಿ ಮಳೆ ನಡುವೆ ಹೆದ್ದಾರಿಯಲ್ಲಿ ಸರಣಿ ಅಪಘಾತ; ಐದು ವಾಹನಗಳು ಜಖಂ

ಬೆಂಗಳೂರು:ಜಿಟಿ ಜಿಟಿ ಮಳೆ ನಡುವೆ ಹೆದ್ದಾರಿಯಲ್ಲಿ ಸರಣಿ ಅಪಘಾತ ನಡೆದಿದೆ. ಐದು ವಾಹನಗಳು ಜಖಂಗೊಂಡಿರುವ ಘಟನೆ ದೇವನಹಳ್ಳಿ ಪಟ್ಟಣದ ಕೆಂಪೇಗೌಡ ಸರ್ಕಲ್​​ನಲ್ಲಿ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಬಳಿಯ ಸಿಗ್ನಲ್​​​ನಲ್ಲಿ ವಾಹನಗಳು ನಿಂತಿದ್ದ ವೇಳೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದಿದೆ. ನಂತರ ಮೂರು ಕಾರು ಒಂದು ಆಟೋ‌ ಕೂಡಾ ಬಂದು ಗುದ್ದಿವೆ. ಲಾರಿ ಚಾಲಕನ ನಿರ್ಲಕ್ಷ್ಯದಿಂದ ಈ ಸರಣಿ ಅಪಘಾತ ನಡೆದಿದೆ.

ಆಟೋ ಚಾಲಕ ದೇವೆಂದ್ರಪ್ಪ ಎಂಬುವವರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ವತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಏರ್ಪೋಟ್ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.