ಬೆಂಗಳೂರು ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಮೊಬೈಲ್ ಆೃಪ್ ಮೂಲಕ ‘ಮನೆ ಮನೆ ಸಮೀಕ್ಷೆ’ಯನ್ನು ಕೈಗೊಳ್ಳುತ್ತಿದೆ.
6ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡುವುದು ಮೂಲಭೂತ ಹಕ್ಕಾಗಿರುವ ಕಾರಣ ನ್ಯಾಯಾಲಯದ ನಿರ್ದೇಶನದ ಮೇರೆಗೆ ಜುಲೈ 31ರೊಳಗೆ ಸಮೀಕ್ಷೆ ಮುಗಿಸಿ ವರದಿ ನೀಡುವಂತೆ ಇಲಾಖೆಯ ಆಯುಕ್ತರು ಸೂಚನೆ ನೀಡಿದ್ದಾರೆ.
ಸಮೀಕ್ಷೆಯನ್ನು ಜಿಲ್ಲಾಧಿಕಾರಿ, ಜಿಪಂ ಸಿಇಒ ನೇತೃತ್ವದಲ್ಲಿ ಆಯೋಜಿಸಿ ಪ್ರಗತಿ ಪರಿಶೀಲಿಸುವುದು. ಸಮೀಕ್ಷೆ ಸಮಯದಲ್ಲಿ ಜಿಲ್ಲಾ ಯೋಜನಾ ಉಪ ಸಮನ್ವಯಧಾಕಾರಿಗಳು, ಶಿಕ್ಷಣಾಧಿಕಾರಿಗಳು ಸೇರಿ ಶಿಕ್ಷಣ ಇಲಾಖೆಯ ವಿವಿಧ ಅಧಿಕಾರಿಗಳಿಂದ ಮೇಲ್ವಿಚಾರಣೆ ನಡೆಸಬೇಕು. ಈ ಮೂಲಕ ಯಾವುದೇ ಮಗು ಸಮೀಕ್ಷೆಯಿಂದ ಹೊರಗುಳಿದಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ತಿಳಿಸಿದ್ದಾರೆ.
ಸಮೀಕ್ಷೆಯಲ್ಲಿ ನಿರ್ವಹಿಸಬೇಕಾದ ಜವಾಬ್ದಾರಿಗಳು:
ಮಕ್ಕಳ ದಾಖಲಾತಿ ಮತ್ತು ಹಾಜರಾತಿಗೆ ಸಂಬಂಧಿಸಿದಂತೆ ಸಮೀಕ್ಷೆ ನಡೆಸಲು ನ್ಯಾಯಾಲಯವು ಸೂಚಿಸಿದೆ. ಈ ಸಮೀಕ್ಷೆ ನಡೆಸಲು ಇಡಿಸಿಎಸ್ ನಿರ್ದೇಶನಾಯವು ಮೊಬೈಲ್ ಅಪ್ಲಿಕೇಷನ್ ಅಭಿವೃದ್ಧಿಪಡಿಸಿರುತ್ತದೆ. ಈ ಆೃಪ್ ಮೂಲಕ ಸಮೀಕ್ಷೆ ಕೈಗೊಳ್ಳುವುದು.
ಸಮೀಕ್ಷೆ ನಡೆಸಲು ಗ್ರಾಮ ಪಂಚಾಯಿತಿಗಳು ಸ್ವ ಸಹಾಯ ಸಂಘಗಳ ಮಹಿಳೆಯರನ್ನು ತೊಡಗಿಸಿಕೊಳ್ಳುವುದು. ಪ್ರತಿ 300 ಮನೆಗಳಿಗೆ ಇಬ್ಬರು ಎಸ್ಸೆಸ್ಸೆಲ್ಸಿ ವಿದ್ಯಾರ್ಹತೆ ಹೊಂದಿರುವ ಮತ್ತು ಸ್ಮಾರ್ಟ್ ೆನ್ ಹೊಂದಿರುವ ಮಹಿಳೆಯರನ್ನು ಸಮೀಕ್ಷೆ ನಡೆಸಲು ಗುರುತಿಸುವುದು.
ತರಬೇತಿ ನೀಡಲು ಮಾಸ್ಟರ್ ಟ್ರೈನರ್‌ಗಳು ಜಿಲ್ಲಾ ಮಟ್ಟದಲ್ಲಿ ತಾಪಂ ಇಒ, ಸಹಾಯಕ ನಿರ್ದೇಶಕ ಮತ್ತು ಗ್ರಾಪಂ ಪಿಡಿಒ ಗಳಿಗೆ ಮೊಬೈಲ್ ಆೃಪ್ ಬಳಕೆ ಕುರಿತು ತರಬೇತಿ ನೀಡಬೇಕು. ಈ ತರಬೇತಿ ನೀಡುವಾಗ ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ತರಬೇತಿಯಲ್ಲಿ ತೊಡಗಿಸಿಕೊಳ್ಳತಕ್ಕದ್ದು.
ಪಿಡಿಒಗಳು ಗಣತಿದಾರರಿಗೆ ತರಬೇತಿ ನೀಡಬೇಕು. ತರಬೇತಿಯಲ್ಲಿ ಸ್ಥಳೀಯ ಶಾಲೆಯ ಮುಖ್ಯ ಶಿಕ್ಷಕರು ಮತ್ತು ಸಮೂಹ ಸಂಪನ್ಮೂಲ ವ್ಯಕ್ತಿಯನ್ನು ತೊಡಗಿಸಿಕೊಳ್ಳುವಂತೆ ಮಾಡುವುದು.
ತಿಂಗಳಾಂತ್ಯಕ್ಕೆ ಸಮೀಕ್ಷೆ ಪೂರ್ಣಗೊಳ್ಳಬೇಕು. ಸಮೀಕ್ಷೆ ನಡೆಸುವ ಸ್ವ- ಸಹಾಯ ಸಂಘದ ಮಹಿಳೆಯರಿಗೆ ಪ್ರತಿ ಮನೆ ಸಮೀಕ್ಷೆಗೆ ನೀಡಲಾಗುವ ಪ್ರೋತ್ಸಾಹ ಧನ ಮತ್ತು ಮೊಬೈಲ್ ಇಂಟರ್‌ನೆಟ್ ವೆಚ್ಚಗಳನ್ನು ಭರಿಉಸವ ಕುರಿತು ಪ್ರತ್ಯೇಕ ಸೂಚನೆಗಳನ್ನು ಹೊರಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರು ಸೂಚನೆ ನೀಡಿದ್ದಾರೆ.