ಬೆಂಗಳೂರು: ಕರೊನಾ ಪರಿಸ್ಥಿತಿ ಕೈಮೀರುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶುಕ್ರವಾರ ತಮ್ಮ ನಿವಾಸದಲ್ಲಿ ತುರ್ತುಸಭೆ ನಡೆಸಿದರು.
ಮುಖ್ಯ ಕಾರ್ಯದರ್ಶಿ ಸೇರಿದಂತೆ ಹಿರಿಯ ಅಧಿಕಾರಿಗಳು ಮತ್ತು ಆರೋಗ್ಯ ಸಚಿವರು ಸೇರಿ ಕೆಲವು ಸಚಿವರಿಗೆ ಸಭೆಗೆ ಬರುವಂತೆ ಆಹ್ವಾನ ನೀಡಿದ್ದರು. ಇದನ್ನೂ ಓದಿರಿ ಈ ವಾರ ಬಿಗ್ ಬಾಸ್ಗೆ ಕಿಚ್ಚ ಸುದೀಪ್ ಬರಲ್ಲ! ಕಾರಣ ಇಲ್ಲಿದೆ
ಸಭೆ ಬಳಿಕ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ, ಅಧಿಕಾರಗಳೊಂದಿಗೆ ಚರ್ಚೆ ನಡೆಸಿದ್ದೇನೆ. ತಜ್ಞರು ಅಭಿಪ್ರಾಯ ಕೊಟ್ಟಿದ್ದಾರೆ. ಕರೊನಾ ಕರ್ಫ್ಯೂ ವಿಸ್ತರಣೆ ಬಗ್ಗೆ ಇನ್ನೆರಡು ದಿನದಲ್ಲಿ ತೀರ್ಮಾನ ಮಾಡಲಾಗುತ್ತೆ. ವಾರದ ಬಳಿಕ ಇನ್ನೇನು ತೀರ್ಮಾನ ಕೈಗೊಳ್ಳಬೇಕೋ ಅದನ್ನು ತೆಗೆದುಕೊಳ್ಳುತ್ತೇವೆ ಎಂದರು.
ಏಪ್ರಿಲ್ 20ರ ತನಕ ಈಗ ಇರುವ ರೂಲ್ಸ್ ಇರುತ್ತದೆ. ನಂತರ ಬೇರೆ ತೀರ್ಮಾನಗಳ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದ ಸಿಎಂ, ಬೇರೆ ರಾಜ್ಯಗಳಿಗೂ ನಮ್ಮ ರಾಜ್ಯಕ್ಕೂ ಹೋಲಿಕೆ ಮಾಡಬೇಡಿ. ನಮ್ಮ ರಾಜ್ಯದ ಪರಿಸ್ಥಿತಿ ಬೇರೆ ಇದೆ. ನೈಟ್ ಕರ್ಫ್ಯೂ ವಿಸ್ತರಣೆ ಬಗ್ಗೆ ಏಪ್ರಿಲ್ 20ರ ನಂತರ ನಿರ್ಧಾರ ಮಾಡುತ್ತೇವೆ ಎಂದರು.
ಬೆಂಗಳೂರಿನಲ್ಲಿ ವಿಪರೀತ ಪ್ರಮಾಣದಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿರುವುದರಿಂದ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ. ಜತೆಗೆ ಜವಾಬ್ದಾರಿ ಹಂಚಿಕೆ ಬಗ್ಗೆಯೂ ತೀರ್ಮಾನವಾಗಿದೆ ಎಂದು ಮೂಲಗಳು ತಿಳಿಸಿವೆ.