ಬಿಲಾಸ್ಪುರ್: ಪರಪುರುಷನ ಜತೆ ಸಂಬಂಧ ಇಟ್ಟುಕೊಂಡಿದ್ದಾಳೆ ಎಂದು ಶಂಕಿಸಿ ಕ್ರೋಧಿತಗೊಂಡ ಪತಿರಾಯ ಹಾಗೂ ಆತನ ಮನೆಯವರು ಮಹಿಳೆಯನ್ನು ರಾತ್ರಿಯಿಡೀ ಕಟ್ಟಿ ಹಾಕಿ ಥಳಿಸಿರುವ ಘಟನೆ ಬಿಹಾರದಲ್ಲಿ ನಡೆದಿದೆ.
ದೀಪಕ್ ರಾಮ್ ಎಂಬುವ ವ್ಯಕ್ತಿ ತನ್ನ ಪತ್ನಿಯನ್ನು ರಾತ್ರಿಯಿಡೀ ಕಂಬಕ್ಕೆ ಕಟ್ಟಿಹಾಕಿ ಥಳಿಸಿದ್ದಾನೆ. ನೆರೆಹೊರೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದು, ನಂತರ ಸ್ಥಳಕ್ಕಾಗಮಿಸಿ ಆತನನ್ನು ಬಂಧಿಸಿದ್ದಾರೆ.
ಕೇವಲ ಗಂಡ ಮಾತ್ರ ಈ ಕೃತ್ಯವೆಸಗಿಲ್ಲ. ಗಂಡನ ತಂದೆ ಸೇರಿ ಆತನ ಸಂಬಂಧಿಕರು ಈ ಕೃತ್ಯದಲ್ಲಿ ಭಾಗಿಯಾಗಿದ್ದು, ಸದ್ಯ ಎಲ್ಲರನ್ನೂ ಬಂಧಿಸಿ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸದ್ಯ ಚೇತರಿಸಿಕೊಳ್ಳುತ್ತಿದ್ದಾಳೆ.