ಬೆಂಗಳೂರು: ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸಚಿವ ಸಂಪುಟ ರಚನೆ ಸವಾಲಾಗಿ ಪರಿಣಮಿಸಿದೆ. ಇಂದು ಸಂಜೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ಭೇಟಿ ಮಾಡಲು ಸಿಎಂ ಸಜ್ಜಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರು ಬೊಮ್ಮಾಯಿಗೆ ಹಲವರು ಮಹತ್ತರ ಸಲಹೆಗಳನ್ನು ಕೊಟ್ಟಿದ್ದಾರೆ.
ಸಂಪೂರ್ಣ ಕ್ಯಾಬಿನೆಟ್ ರಚನೆ ಮಾಡಿಕೊ. ವರಿಷ್ಠರ ಮುಂದೆ ರಾಜ್ಯದ ಸಮಸ್ಯೆ ವಿವರಿಸು. ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಬರ್ತಿದೆ. ಕೆಲ ಜಿಲ್ಲೆಗಳಲ್ಲಿ ನೆರೆ, ರಾಜ್ಯದಲ್ಲಿ ಕರೊನಾನಾ ಸಂಕಷ್ಟ ಎದುರಾಗಿದೆ. ಹೀಗಾಗಿ ಜಿಲ್ಲೆಯನ್ನ ಅಧಿಕಾರಿಗಳಿಂದಲೇ ನಿಭಾಯಿಸಲು ಸಾಧ್ಯವಿಲ್ಲ. ಸಂಪೂರ್ಣ ಕ್ಯಾಬಿನೆಟ್ ಇರಬೇಕು. ಕನಿಷ್ಠ 30 ಜನ ಶಾಸಕರನ್ನ ಸಂಪುಟಕ್ಕೆ ಸೇರಿಸಿಕೊಳ್ಳಲು ಹೈಕಮಾಂಡ್ನಿಂದ ಅನುಮತಿ ಪಡೆದುಕೊಂಡು ಬಾ. ಇನ್ನು ಇರೋ ಮೂರು ಸ್ಥಾನ ಮುಂದೆ ಸೇರಿಸಿಕೊಳ್ಳಬಹುದು ಎಂದು ಬೊಮ್ಮಾಯಿಗೆ ಬಿಎಸ್ವೈ ಸಲಹೆ ನೀಡಿದ್ದಾರೆ.
ನೆರೆ ಮತ್ತು ಕರೊನಾ ಪರಿಸ್ಥಿತಿಯನ್ನು ಸರಿಯಾಗಿ ನಿರ್ವಹಣೆ ಮಾಡದಿದ್ದರೆ ಮುಂದೆ ಚುನಾವಣೆ ಎದುರಿಸುವುದು ಕಷ್ಟ. ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಬಳಿಕ ವಿಧಾನಸಭೆ ಚುನಾವಣೆ ಬರುತ್ತೆ. ಹಾಗಾಗಿ ಸಂಪೂರ್ಣ ಕ್ಯಾಬಿನೆಟ್ ರಚನೆಗೆ ಅವಕಾಶ ಕೊಡುವಂತೆ ಹೈಕಮಾಂಡ್ಗೆ ಮನವಿ ಮಾಡು ಎಂದು ಸಿಎಂಗೆ ಬಿಎಸ್ವೈ ಹೇಳಿ ಕಳುಹಿಸಿದ್ದಾರೆ.