ಬೆಂಗಳೂರು: ಇಂದು ಬೆಳಗ್ಗೆ ಸಿ.ಪಿ.ಯೋಗೇಶ್ವರ್ ಬೆಂಗಳೂರಿನಿಂದ ದೆಹರಿಗೆ ತೆರಳಿದ್ದಾರೆ. ಬಿ.ಎಸ್. ಯಡಿಯೂರಪ್ಪ ವಿರುದ್ಧ ಬಂಡಾಯ ಎದ್ದಿದ್ದ ಸಿ.ಪಿ.ಯೋಗೇಶ್ವರ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ಸ್ಥಾನ ಸಿಕ್ಕಿಲ್ಲ. ಇದರಿಂದ ಭಾರೀ ಅಸಮಾಧಾನಗೊಂಡಿರುವ ಯೋಗೇಶ್ವರ್ ಹೈಕಮಾಂಡ್ ಬಳಿ ಮತ್ತೊಮ್ಮೆ ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಲು ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದೆಹಲಿಯಲ್ಲಿ ಇಂದು ಯೋಗೇಶ್ವರ್ ಯಾರನ್ನು ಭೇಟಿ ಮಾಡುತ್ತಾರೆ ಎಂಬುದಕ್ಕೆ ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ. ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸಬೇಕು ಅಂದ್ರೆ ನನಗೂ ಸಂಪುಟದಲ್ಲಿ ಸ್ಥಾನಮಾನ ಸಿಗಬೇಕು. ಆಗ ಮಾತ್ರವೇ ನಮ್ಮ ಗುರಿ ಸಾಧಿಸಲು ಸಾಧ್ಯ ಎಂದು ವರಿಷ್ಟರ ಮನವೊಲಿಸಲು ಯೋಗೇಶ್ವರ್ ಕಸರತ್ತು ನಡೆಸುತ್ತಿದ್ದಾರೆ.