ಕಲಬುರಗಿ: ನಿದ್ರೆಗೆ ಜಾರಿದ್ದ ಕರೊನಾ ಸೋಂಕಿತ ಯುವತಿ ಮೇಲೆ ಕಾಮುಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಗರದ ಜಿಮ್ಸ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ನಡೆದಿದೆ.
25 ವರ್ಷದ ಯುವತಿಗೆ ಕರೊನಾ ಸೋಂಕು ತಗುಲಿದ್ದು, ಜಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ನಿನ್ನೆ ರಾತ್ರಿ ಅಲ್ಲಿಗೆ ಬಂದ ಖಾಸಗಿ ಆಂಬುಲೆನ್ಸ್ ಚಾಲಕ ಪಿಂಟು ಎಂಬಾತ ಯುವತಿ ಮಲಗಿದ್ದಾಗ ಆಕೆಯ ಡೈಪರ್ ಮತ್ತು ಯೂರಿನ್ ಪೈಪ್ ತೆಗೆದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಇದನ್ನೂ ಓದಿರಿ ಆಸ್ಪತ್ರೆಯಲ್ಲಿ ಕರೊನಾ ಸೋಂಕಿತೆಗೆ ಲೈಂಗಿಕ ಕಿರುಕುಳ? ಕೈ ಸನ್ನೆ ಮೂಲಕವೇ ಮಗನಿಗೆ ಹೇಳಿ ಕಣ್ಣೀರಿಟ್ಟ ಸಂತ್ರಸ್ತೆ
ಯುವತಿ ಎಚ್ಚರಗೊಂಡು ಚೀರಾಡುತ್ತಿದ್ದಂತೆ ಅಕ್ಕ-ಪಕ್ಕದ ರೋಗಿಗಳು ಎಚ್ಚರಗೊಳ್ಳುತ್ತಿದ್ದ ಆರೋಪಿ ಪಿಂಟು ಅಲ್ಲಿಂದ ಓಡಿಹೋಗಿದ್ದ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಬ್ರಹ್ಮಪುರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ಪಿಂಟುನನ್ನು ಬಂಧಿಸಿದ್ದಾರೆ.