ಆಮ್ ಆದ್ಮಿ ಪಕ್ಷ ಕಾರ್ಯಕರ್ತರು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕೆ.ಕಿರಣ್, ನೂರ್‌ಜಹಾನ್, ಮಂಜುನಾಥ, ಲಿಂಗರಾಜು, ಲಕ್ಷ್ಮೀಶ, ಸಬ್ರಿಯಾ, ಸಾಜಿದಾ, ವಿಜಯ್ ಇದ್ದರು.  
ನ್ಯೂಸ್

ರಾಜ್ಯ ಸರ್ಕಾರದ ವಿರುದ್ಧ ಆಮ್ ಆದ್ಮಿ ಪಕ್ಷ ಪ್ರತಿಭಟನೆ

ಶಿವಮೊಗ್ಗ: ರಾಜ್ಯ ಸರ್ಕಾರ ಹಾಲು, ಮೊಸರು ಸೇರಿ ದವಸ-ಧಾನ್ಯಗಳ ಬೆಲೆ ಏರಿಸುವ ಮೂಲಕ ಗಾಯದ ಮೇಲೆ ಬರೆ ಎಳೆದಿದೆ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷ ಕಾರ್ಯಕರ್ತರು ಶನಿವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ದೇಶದಲ್ಲಿ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ಬೆಲೆ ಏರಿಕೆಯನ್ನು ಗುರಿಯಾಗಿಟ್ಟುಕೊಂಡು ಅಧಿಕಾರಕ್ಕೆ ಬಂದರು. ಆದರೆ ಅಧಿಕಾರಕ್ಕೇರುತ್ತಿದ್ದಂತೆ ಅದೇ ಬೆಲೆ ಏರಿಕೆ ಅಸ್ತ್ರವನ್ನು ಜನರ ಮೇಲೆ ಬಳಸುವ ಮುಖಾಂತರ ಜನಸಾಮಾನ್ಯರನ್ನು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿತ್ತು. ಇದೀಗ ಇದೇ ದಾರಿಯನ್ನು ಮುಂದುವರಿಸಿರುವ ರಾಜ್ಯ ಸರ್ಕಾರ ಜನರಿಗೆ ಬೆಲೆ ಏರಿಕೆಯ ಛಾಟಿ ಬೀಸಿದೆ ಎಂದು ದೂರಿದರು.
ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷಗಳು ಒಂದೇ ನಾಣ್ಯದ ಎರಡು ಮುಖಗಳಾಗಿವೆ. ಈ ದ್ವಿಮುಖ ನೀತಿಯನ್ನು ಕೈಬಿಟ್ಟು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನರ ಸಮಸ್ಯೆ ಅರಿತು ಕೂಡಲೇ ಅಗತ್ಯ ವಸ್ತುಗಳ ಬೆಲೆಯನ್ನು ಇಳಿಸಬೇಕು ಎಂದು ಒತ್ತಾಯಿಸಿದರು. ಜಿಲ್ಲಾಧ್ಯಕ್ಷ ಕೆ.ಕಿರಣ್, ಮುಖಂಡರಾದ ನೂರ್‌ಜಹಾನ್, ಮಂಜುನಾಥ, ಲಿಂಗರಾಜು, ಲಕ್ಷ್ಮೀಶ, ಸಬ್ರಿಯಾ, ಸಾಜಿದಾ, ವಿಜಯ್ ಮತ್ತಿತರರು ಪ್ರತಿಭಟನೆಯಲ್ಲಿದ್ದರು.