ನ್ಯೂಸ್

AAP: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆ!

ನವದೆಹಲಿ: ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ(AAP) ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳದೆ ಏಕಾಂಗಿಯಾಗಿ ಸ್ಪರ್ಧಿಸಲಿದೆ.

ಅತ್ಯಂತ ಆತ್ಮವಿಶ್ವಾಸದಲ್ಲಿರುವ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳದಿರಲು ನಿರ್ಧರಿಸಲಾಗಿದೆ. ಕಾಂಗ್ರೆಸ್ ದುರಹಂಕಾರಿ ಮನೋಭಾವ ಹೊಂದಿದ್ದು, ಬಿಜೆಪಿ ವಿರುದ್ಧ ಏಕಾಂಗಿಯಾಗಿ ಹೋರಾಡಲಿದೆ ಎಂದು ಪ್ರಿಯಾಂಕಾ ಕಕ್ಕರ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಹರಿಯಾಣ ಮತ್ತು ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಯ ಫಲಿತಾಂಶ ಕುರಿತುಪ್ರತಿಕ್ರಿಯಿಸಿದ ಅವರು, ಹರಿಯಾಣದಲ್ಲಿ ಕಾಂಗ್ರೆಸ್ ಇಂಡಿಯಾ ಮೈತ್ರಿಕೂಟದ ಪಾಲುದಾರ ಪಕ್ಷಗಳತ್ತ ಹೆಚ್ಚು ಗಮನ ಹರಿಸಿಲ್ಲ. ಈ ಚುನಾವಣೆಯಲ್ಲಿ ಪಕ್ಷದ ಸೋಲಿಗೆ ಅತಿಯಾದ ಆತ್ಮವಿಶ್ವಾಸವೇ ಕಾರಣ ಎಂದು ಹೇಳಿದರು.

ಕಳೆದ ದಶಕದಲ್ಲಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದಿರುವ ಸ್ಥಾನಗಳ ಸಂಖ್ಯೆ ಶೂನ್ಯ ಎಂದು ಪ್ರಿಯಾಂಕಾ ವ್ಯಂಗ್ಯವಾಡಿದರು.

ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಎಎಪಿ ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮೂರು ಲೋಕಸಭಾ ಸ್ಥಾನಗಳನ್ನು ಹಂಚಿಕೆ ಮಾಡಿತ್ತು. ಆದರೆ ಆ ಸ್ಥಾನಗಳಲ್ಲೂ ಪಕ್ಷ ಗೆಲ್ಲಲು ಸಾಧ್ಯವಾಗಿಲ್ಲ ಎಂದರು.

ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಒಂದು ಸ್ಥಾನವನ್ನು ಗೆದ್ದಿದೆ ಇದು ಜನರಲ್ಲಿ ಅಚ್ಚರಿ ಮೂಡಿಸಿದೆ ಎಂದು ವಿವರಿಸಿದರು.