ಕೊಡಗು: ಶುಕ್ರವಾರ ಬೆಳಗ್ಗೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನಲ್ಲಿ ಪಿಕಪ್ ಗಾಡಿ ಮತ್ತು ಓಮ್ನಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ದುರ್ಮರಣಕ್ಕೀಡಾಗಿದ್ದಾರೆ.
ಮಡಿಕೇರಿ ತಾಲೂಕಿನ ಭೇತ್ರಿ ಬಳಿ ಅಪಘಾತ ಸಂಭವಿಸಿದೆ. ಓಮ್ನಿಯಲ್ಲಿ ಮೂರ್ನಾಡು ಗ್ರಾಮದ ಇಬ್ಬರು ಪ್ರಯಾಣಿಸುತ್ತಿದ್ದರು. ಅಪಘಾತದ ರಭಸಕ್ಕೆ ಓಮ್ನಿ ಕಾರು ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಹರೀಶ್ ಹಾಗೂ ಸುಬ್ರಮಣಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.