ಕಡೂರು: ಎರಡು ಬೈಕ್ಗಳ ನಡುವಿನ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡ ಘಟನೆ ಚಿಕ್ಕಮಗಳೂರಿನ ಕಡೂರಿನಲ್ಲಿ ನಡೆದಿದೆ.
ಅಪಘಾತದ ರಭಸಕ್ಕೆ ಎರಡೂ ಬೈಕ್ಗಳಿಗೂ ಬೆಂಕಿ ಹೊತ್ತಿಕೊಂಡು, ಧಗಧಗನೆ ಉರಿದುಹೋಗಿವೆ. ಈ ಭೀಕರ ದೃಶ್ಯದ ಫೋಟೋಗಳು ವೈರಲ್ ಆಗಿವೆ. ಇದನ್ನೂ ಓದಿ:
ಕಡೂರಿನ ಗೆದ್ದಲಹಳ್ಳಿ ಬಳಿ ಯೂನಿಕಾರ್ನ್ ಮತ್ತು ಪಲ್ಸರ್ ಬೈಕ್ಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ಯೂನಿಕಾರ್ನ್ ಬೈಕ್ನಲ್ಲಿ ಹಾಸನ ಕಡೆಗೆ ಹೋಗುತ್ತಿದ್ದ ಸವಾರ ಮಂಜುನಾಥ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪಲ್ಸರ್ ಬೈಕ್ನಲ್ಲಿ ಹಾಸನ ಕಡೆಯಿಂದ ಬರುತ್ತಿದ್ದ ಸಂಜಯ್ ಮತ್ತು ಗೌತಮ್ ಎಂಬುವರು ಗಾಯಗೊಂಡಿದ್ದಾರೆ. ಅದರಲ್ಲೂ ಸಂಜಯ್ ಸ್ಥಿತಿ ತೀವ್ರ ಗಂಭೀರವಾಗಿದೆ.
ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.