ದಾವಣಗೆರೆ: ನಗರದ ಹೊರಭಾಗದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಲಾರಿ ಮತ್ತು ಬೈಕ್ ನಡುವೆ ಬುಧವಾರ ಭೀಕರ ಅಪಘಾತ ಸಂಭವಿಸಿದ್ದು, ನರೇಗಾ ಇಂಜಿನಿಯರ್ವೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ದಾವಣಗೆರೆ ತಾಲೂಕಿನ ಹೊಸ ನಾಯಕನಹಳ್ಳಿ ಗ್ರಾಮದ ಮಿಥುನ್(34) ಮೃತ ದುರ್ದೈವಿ. ಜಗಳೂರು ತಾಲೂಕಿನಲ್ಲಿ ನರೇಗಾ ಇಂಜಿನಿಯರ್ ಆಗಿದ್ದ ಕೆಲಸ ಮಾಡುತ್ತಿದ್ದರು.
ಸ್ನೇಹಿತನ ಮದುವೆ ಮುಗಿಸಿಕೊಂಡು ಬೈಕ್ನಲ್ಲಿ ವಾಪಸ್ ಹೋಗುವಾಗ ಮಾರ್ಗಮಧ್ಯೆ ಮಿಥುನ್ ಅಪಘಾತಕ್ಕೀಡಾಗಿದ್ದು, ತಲೆಗೆ ಬಲವಾದ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದಾವಣಗೆರೆಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.