ನ್ಯೂಸ್

ಧರ್ಮಪುರಿಯಲ್ಲಿ ಭೀಕರ ಅಪಘಾತ; ಎಂಟುಕ್ಕೂ ಹೆಚ್ಚು ವಾಹನ ನುಜ್ಜುಗುಜ್ಜು, ನಾಲ್ವರು ಬಲಿ

Mandara

ಚೆನ್ನೈ: ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ತೋಪ್ಪೂರಿನ ಸೇತುವೆ ಬಳಿ ಭೀಕರ ಅಪಘಾತ ಸಂಭವಿಸಿದೆ. ಶನಿವಾರ ಸಂಜೆ ಸಂಭವಿಸಿದ ಅಪಘಾತದಿಂದಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಧರ್ಮಪುರಿ ರಸ್ತೆಯಿಂದ ಸೇಲಂಗೆ ಹೋಗುವ ರಸ್ತೆಯಲ್ಲಿ ನಿಂತಿದ್ದ ವಾಹನಗಳಿಗೆ ಕಂಟೇನರ್ ಲಾರಿ ಡಿಕ್ಕಿ ಹೊಡೆದಿದೆ. ಒಂದಲ್ಲ, ಎರಡಲ್ಲ ಬರೋಬ್ಬರಿ ಎಂಟು ಕಾರಿಗೆ ಡಿಕ್ಕಿ ಹೊಡೆದಿದೆ. ಇದರ ಜತೆ ಬೈಕ್, ಟಾಟಾಏಸ್ ಗಾಡಿಗೂ ಡಿಕ್ಕಿ ಹೊಡೆದಿದೆ. ಎಲ್ಲ ವಾಹನಗಳು ನುಜ್ಜುಗುಜ್ಜಾಗಿವೆ. ಅಪಘಾತದ ಕುರಿತಾಗಿ ತೊಪ್ಪೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತಕ್ಕೆ ಕಾರಣವೇನೆಂಬುದು ತನಿಖೆಯಿಂದ ಹೊರಬರಬೇಕಿದೆ. (ದಿಗ್ವಿಜಯ ನ್ಯೂಸ್​)