ಚಿತ್ರದುರ್ಗ: ಹಿರಿಯೂರು ತಾಲೂಕಿನ ಕೆ.ಆರ್.ಹಳ್ಳಿ ಗೇಟ್ ಬಳಿ ಸೋಮವಾರ ಸರಣಿ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಹೊಸದುರ್ಗ ನಿವಾಸಿ ನೇಮಿರಾಜ್(58), ನಂದಾ(53) ಮತ್ತು ರಂಗ (35) ಎಂದು ಗುರುತಿಸಲಾಗಿದೆ. ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಹಿರಿಯೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿರಿ ವಿಡಿಯೋ ಕಾಲ್ ರಿಸೀವ್ ಮಾಡಿ ಹನಿಟ್ರ್ಯಾಪ್ಗೆ ಬಿದ್ದ ಮಾಜಿ ಶಾಸಕನ ಪುತ್ರನಿಗೆ ಸಂಕಷ್ಟ!
ಬೆಂಗಳೂರಿನಿಂದ ಹೊಸದುರ್ಗಕ್ಕೆ ತೆರಳುತ್ತಿದ್ದ ಟಾಟಾ ಸಫಾರಿ ರಸ್ತೆ ಡಿವೈಡರ್ ದಾಟಿ ಕ್ಯಾಂಟರ್ಗೆ ಡಿಕ್ಕಿ ಹೊಡೆದಿದೆ. ಬಳಿಕ ಚಿತ್ರದುರ್ಗ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಇಟಿಯೋಸ್ ಕಾರಿಗೆ ಡಿಕ್ಕಿಯಾಗಿದೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.