ನ್ಯೂಸ್

ಬೈಕ್​ ಅಪಘಾತದಲ್ಲಿ ಮೃತ ಪಟ್ಟ ಮಗನ ಅಂಗಾಂಗವನ್ನು ಹಾಸನದ ಹಿಮ್ಸ್​ಗೆ ದಾನ ಮಾಡಿದ ಪಾಲಕರು

ಹಾಸನ: ಅಪಘಾತದಲ್ಲಿ ಮೃತಪಟ್ಟ ಮಗನ ಅಂಗಾಂಗ ದಾನ ಮಾಡಿ ಪಾಲಕರು ಮಾನವೀಯತೆ ಮೆರೆದಿದ್ದಾರೆ.

ಹಾಸನ ತಾಲೂಕಿನ ಮರ್ಕೂಲಿ ಗ್ರಾಮದ ರಂಗಸ್ವಾಮಿ ಮತ್ತು ಶಿವಮ್ಮ ದಂಪತಿಯ ಪುತ್ರ ಸಚಿನ್ ಬೈಕ್​ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ.

ಕಳೆದ 15 ದಿನದಿಂದ ಸಾವು ಬದುಕಿನ ನಡುವೆ ಹೋರಾಟ ಮಾಡಿ ಶುಕ್ರವಾರ ಮೃತಪಟ್ಟಿದ್ದಾನೆ. ಹಾಸನದ ಹಿಮ್ಸ್ ಕಾಲೇಜಿನಲ್ಲಿ ಅಂಗಾಂಗ ದಾನ ಮಾಡಿ ಪಾಲಕರು ಮಾನವೀಯತೆ ಮೆರೆದಿದ್ದಾರೆ.