ನ್ಯೂಸ್

ಭೀಕರ ರಸ್ತೆ ಅಪಘಾತ; ಕಾರ್​ಗೆ ಟಿಪ್ಪರ್ ಡಿಕ್ಕಿ, ಮಗು ಸೇರಿದಂತೆ 7 ಮಂದಿ ಸಾವು| Accident

Accident: ಆಂಧ್ರ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯೊಂದರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಒಂದು ಮಗು ಸೇರಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಬುಧವಾರ (ಸೆ. 17) ವರದಿಯಾಗಿದೆ.

ನೆಲ್ಲೂರು ಜಿಲ್ಲೆ ಸಂಗಮ್ ಮಂಡಲದ ರಾಷ್ಟ್ರೀಯ ಹೆದ್ದಾರಿ ಪೆರಮನ್ ಬಳಿ ಕಾರಿಗೆ ಟಿಪ್ಪರ್ ಲಾರಿಯೊಂದು ಡಿಕ್ಕಿ ಹೊಡೆದು ಅಪಘಾತವಾಗಿದೆ. ಓರ್ವ ಮಗು ಸೇರಿ ಒಟ್ಟು 7 ಮಂದಿ ಮೃತಪಟ್ಟಿದ್ದಾರೆ. ಹೆದ್ದಾರಿಯ ರಾಂಗ್​ ವೇನಲ್ಲಿ ಅತೀ ವೇಗದಲ್ಲಿ ಬರುತ್ತಿದ್ದ ಲಾರಿ, ಪಕ್ಕದಲ್ಲಿ ಹೋಗುತ್ತಿದ್ದ ಕಾರ್​ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿ ರಭಸಕ್ಕೆ ಕಾರು ನುಜ್ಜುಗುಜ್ಜಾಗಿ, ಮೃತದೇಹಗಳು ಸಹ ಗುರುತು ಸಿಗದಂತೆ ಆಗಿವೆ ಎನ್ನಲಾಗಿದೆ. ಮೃತರಾದವರ ಮಾಹಿತಿ ಇನ್ನೂ ತಿಳಿದು ಬಂದಿಲ್ಲ. ಕಾರು ನೆಲ್ಲೂರಿನಿಂದ ಕಡಪ ಕಡೆಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ.

ಇನ್ನೂ ಅಪಘಾತದ ಬಗ್ಗೆ ಪ್ರತಿಕ್ರಿಯಿಸಿರುವ ಆಂಧ್ರ ಸಿಎಂ ಸಿ.ಎನ್.ಚಂದ್ರಬಾಬು ನಾಯ್ಡು, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದು, ಅಧಿಕಾರಿಗಳಿಗೆ ನೆರವು ನೀಡುವಂತೆ ಸೂಚಿಸಿದ್ದಾರೆ. ಘಟನೆ ಬಗ್ಗೆ ತನಿಖೆಗೆ ಆದೇಶಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. (ಏಜೆನ್ಸೀಸ್)