ನ್ಯೂಸ್

ಪೊಲೀಸ್​ ಬೈಕ್​ಗಳ ಡಿಕ್ಕಿ; ಪೇದೆ ಸಾವು, ಎಎಸ್​ಐ ಗಂಭೀರ

ಮಂಡ್ಯ: ಪೊಲೀಸ್ ಸಿಬ್ಬಂದಿ ಸಂಚರಿಸುತ್ತಿದ್ದ ಎರಡು ಬೈಕ್​ಗಳ ನಡುವೆ ಡಿಕ್ಕಿಯಾಗಿ ಡಿಎಆರ್ ಪೇದೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಎಎಸ್ಐಗೆ ಗಂಭೀರ ಗಾಯಗೊಂಡಿದ್ದಾರೆ.

ಮದ್ದೂರು ತಾಲೂಕು ತೊರೆಶೆಟ್ಟಹಳ್ಳಿ ಗ್ರಾಮದಲ್ಲಿ ಘಟನೆ ಇಂದು(ಗುರುವಾರ) ಈ ಅವಘಡ ಸಂಭವಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಪೇದೆ ಅರುಣ್(26) ಮೃತರು. ಕೆಸ್ತೂರಿನ ಎಎಸ್ಐ ಬಾಲಯ್ಯ ಗಾಯಗೊಂಡಿದ್ದು, ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ತೊಪ್ಪನಹಳ್ಳಿಯ ವ್ಯಕ್ತಿಗೆ ಅರುಣ್ ಗನ್‌ಮ್ಯಾನ್ ಆಗಿದ್ದರು. ಕಾರ್ಯನಿಮಿತ್ತ ತೊರೆಶೆಟ್ಟಹಳ್ಳಿಗೆ ಆಗಮಿಸಿದ್ದರು. ಈ ವೇಳೆ ಪೇದೆ ಸವಾರಿ ಮಾಡುತ್ತಿದ್ದ ಬೈಕ್​ ಮತ್ತು ಎಎಸ್​ಐ ಕುಳಿತಿದ್ದ ಬೈಕ್​ ನಡುವೆ ಮುಖಾಮುಖಿ ಡಿಕ್ಕಿಯಾಗಿವೆ.

ಮೃತರ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಮದ್ದೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಎಎಸ್ಪಿ ಡಾ.ಶೋಭಾರಾಣಿ, ಡಿವೈಎಸ್ಪಿ ಪೃಥ್ವಿ, ಸಿಪಿಐ ಪ್ರಸಾದ್ ಪರಿಶೀಲನೆ ನಡೆಸಿದರು.