ನ್ಯೂಸ್

ತಲೆ ಮೇಲೆ ಕಲ್ಲು ಹಾಕಿ ಬರ್ಬರ ಹತ್ಯೆ; ಒಂದೇ ಘಂಟೆಯಲ್ಲಿ ಆರೋಪಿಗಳು ಅರೆಸ್ಟ್​​!

ರಾಮನಗರ: ತಲೆ ಮೇಲೆ ಕಲ್ಲು ಹಾಕಿ ಬರ್ಬರ ಹತ್ಯೆ ಮಾಡಿದ ಘಟನೆ ಕೆ.ಜಿ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಒಂದೇ ಘಂಟೆಯಲ್ಲಿ ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ.

ಅಶ್ವಥ್ (28) ಕೊಲೆಯಾದ ಯುವಕ. ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ ಮಾಡಲಾಗಿತ್ತು. ರಾಮನಗರ ಗ್ರಾಮಾಂತರ ಪೋಲಿಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಅಶ್ವಥ್ ಕಳೆದ ಒಂದೂವರೆ ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದನು. ಹುಡುಗಿಯ ಸಂಬಂಧಿಕರೇ ಕೊಲೆ ಮಾಡಿದ್ದಾರೆ ಎಂದು ಅಶ್ವಥ್ ಕುಟುಂಬಸ್ಥರ ಆರೋಪ ಮಾಡಿದ್ದರು. ಯುವತಿ ಸಹೋದರ ಭರತ್ ಹಾಗೂ ಇಬ್ಬರು ಸ್ನೇಹಿತರನ್ನು ಪೋಲೀಸರು ಬಂಧಿಸಿದ್ದಾರೆ.

ಆರೋಪಿಗಳಿಂದ ಒಂದು ಲಾಂಗ್ ಹಾಗೂ ಬೈಕ್ ಪೋಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ. ರಾಮನಗರ ಗ್ರಾಮಾಂತರ ಪೋಲಿಸರಿಂದ ಈ ಕಾರ್ಯಾಚರಣೆ ನಡೆದಿದೆ.