ಮುಂಬೈ: ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತನ್ನ ಪತ್ನಿ ಮತ್ತು ಸೋದರಳಿಯನನ್ನು ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.
ಇದನ್ನೂ ಓದಿ: ರೆಸ್ಟೊರೆಂಟ್ನಲ್ಲಿ ಕೆಲಸ ಮಾಡುತ್ತಿರುವ ಖ್ಯಾತ ಗಾಯಕಿ; ಅಷ್ಟೊಂದು ಕಷ್ಟ ಇದ್ಯಾ ಮೇಡಂ? ಎಂದ ಫ್ಯಾನ್ಸ್
ಭರತ್ ಗಾಯಕ್‌ವಾಡ್ ( 57) ಎಸಿಪಿ ಹಾಗೂ ಮೃತರಲ್ಲಿ ಇಬ್ಬರನ್ನು ಪೊಲೀಸ್ ಅಧಿಕಾರಿಯ ಪತ್ನಿ ಮೋನಿ ಗಾಯಕ್ವಾಡ್ (44) ಮತ್ತು ಸೋದರಳಿಯ ದೀಪಕ್ (35) ಎಂದು ಗುರುತಿಸಲಾಗಿದೆ.ಸಹಾಯಕ ಪೊಲೀಸ್ ಕಮಿಷನರ್ (ಎಸಿಪಿ) ಅವರು ಸೋಮವಾರ ಪುಣೆ ನಗರದ ತನ್ನ ಮನೆಯಲ್ಲಿ ತನ್ನ ಪತ್ನಿ ಮತ್ತು ಸೋದರಳಿಯನನ್ನು ಗುಂಡಿಕ್ಕಿ ಕೊಂದಿದ್ದು, ಸ್ವತಃ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇಂದು ಮುಂಜಾನೆ 3.30ರ ಸುಮಾರಿಗೆ ಪುಣೆಯ ಬ್ಯಾನರ್ ಪ್ರದೇಶದ ಎಸಿಪಿ ಭರತ್ ಗಾಯಕ್‌ವಾಡ್ ಅವರ ಬಂಗಲೆಯಲ್ಲಿ ಈ ಘಟನೆ ನಡೆದಿದೆ. ಈ ಘಟನೆಗೆ ಕಾರಣಗಳು ಇನ್ನೂ ತಿಳಿದುಬಂದಿಲ್ಲ. ಗಾಯಕ್ವಾಡ್ ಅಮರಾವತಿ ಎಸಿಪಿಯಾಗಿ ಕರ್ತವ್ಯ ನಿರ್ವಹಿಸಿದ ನಂತರ ಮನೆಗೆ ಮರಳಿದ್ದರು.
ಸೋಮವಾರ ಮುಂಜಾನೆ 3.30 ರ ಸುಮಾರಿಗೆ ಎಸಿಪಿ ಮೊದಲು ತನ್ನ ಪತ್ನಿಯ ತಲೆಗೆ ಗುಂಡು ಹಾರಿಸಿದ್ದಾನೆ . ಗುಂಡಿನ ಸದ್ದು ಕೇಳಿ ಓಡಿ ಬಂದು ಮಗ ಮತ್ತು ಸೋದರಳಿಯ ಬಾಗಿಲು ತೆರೆದಾಗ ಗಾಯಕ್ವಾಡ್ ಅವರು ತಮ್ಮ ಸೋದರಳಿಯ ಮೇಲೆ ಗುಂಡು ಹಾರಿಸಿದ್ದಾರೆ.
ಬಳಿಕ ಬಂದೂಕಿನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.