ನ್ಯೂಸ್

ಯತ್ನಾಳ್ ವಿರುದ್ಧ ಕ್ರಮ ವರಿಷ್ಠರ ನಿರ್ಧಾರಕ್ಕೆ ಬಿಟ್ಟದ್ದು : ವಿಜಯೇಂದ್ರ

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳರ ವಿಷಯವನ್ನು ಕೇಂದ್ರದ ವರಿಷ್ಠರು ಗಮನಿಸುತ್ತಿದ್ದಾರೆ. ಶಿಸ್ತು ಕ್ರಮ ಕೈಗೊಳ್ಳಬೇಕೇ ಅಥವಾ ಹೀಗೇ ಸುಮ್ಮನೇ ಬಿಡಬೇಕೇ ಎಂಬುದನ್ನು ನಿರ್ಧರಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಪಕ್ಷದ ರಾಜ್ಯ ಕಚೇರಿಯಲ್ಲಿ ಸುದ್ದಿಗಾರರಿಗೆ ಮಂಗಳವಾರ ಪ್ರತಿಕ್ರಿಯಿಸಿದ ಅವರು, ಯತ್ನಾಳ್ ವಿರುದ್ಧ ಮಾತ್ರ ಶಿಸ್ತು ಕ್ರಮವೇ ಅಥವಾ ಅವರ ಸುತ್ತ ಇರುವವರ ಬಗ್ಗೆ ಕ್ರಮ ಆಗಲಿದೆಯೇ ಎನ್ನುವುದನ್ನೆಲ್ಲ ಪಕ್ಷದ ರಾಷ್ಟ್ರೀಯ ನಾಯಕರು ನೋಡಿಕೊಳ್ಳುತ್ತಾರೆ ಎಂದರು.

ಸಂಘಟನಾ ಪರ್ವದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್, ಕರ್ನಾಟಕದ ಸಹ ಉಸ್ತುವಾರಿ ಸುಧಾಕರ ರೆಡ್ಡಿ, ಕೇಂದ್ರದ ಮಾಜಿ ಸಚಿವ ರಾಧಾಕೃಷ್ಣನ್ ನಾಲ್ಕೂವರೆ ತಾಸುಗಳ ಕಾಲ ಸಕ್ರಿಯ ಸದಸ್ಯತ್ವ ಮುಂದುವರಿಕೆ, ಬೂತ್ ಸಮಿತಿಗಳ ರಚನೆ, ಮಂಡಲ ಸಮಿತಿಗಳ ರಚನೆ ಕುರಿತು ಸಮಗ್ರವಾಗಿ ಚರ್ಚೆ ಮಾಡಿದ್ದಾರೆ; ‘ಸಂಘಟನಾ ಪರ್ವ’ ಯಶಸ್ಸಿಗೆ ಸಂಬಂಧಿಸಿ ಮಾರ್ಗದರ್ಶನ ನೀಡಿದ್ದಾರೆ ಎಂದು ತಿಳಿಸಿದರು.

ಸಂಘಟನೆ ಗಟ್ಟಿಗೊಳಿಸುವ ಕೆಲಸ

ಕೋರ್ ಕಮಿಟಿ ಸಭೆಯೂ ನಡೆದಿದೆ. ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಕೆಲವು ಸಲಹೆಗಳನ್ನೂತಿಳಿಸಿದ.ರುದರದ್ದಾರೆ ಎಂದು ವಿವರಿಸಿದರು. ಜಿಲ್ಲಾಧ್ಯಕ್ಷರು ಮತ್ತು ರಾಜ್ಯದ ಪದಾಧಿಕಾರಿಗಳು ಇವೆಲ್ಲವನ್ನೂ ಗಮನಿಸಿ ಸಂಘಟನೆ ಗಟ್ಟಿಗೊಳಿಸುವ ಕೆಲಸ ಮುಂದಿನ ದಿನಗಳಲ್ಲಿ ನಡೆಯಲಿದೆ ಎಂಬ ಮಾಹಿತಿ ನೀಡಿದರು.

ಶಾಸಕ ಯತ್ನಾಳ್ ಉಚ್ಚಾಟನೆಗೆ ಒತ್ತಾಯಿಸಿ ಜಿಲ್ಲಾ ಘಟಕಗಳ ಅಧ್ಯಕ್ಷರು ರಾಷ್ಟ್ರೀಯ ನಾಯಕರಿಗೆ ಯಾವುದೇ ಮನವಿ ನೀಡಿಲ್ಲ ಯಾರೂ ಭಯಪಡುವ ಅವಶ್ಯಕತೆ ಇಲ್ಲ ಎಂದು ಬಿ.ವೈ.ವಿಜಯೇಂದ್ರ ಎನ್ನುತ ಮುಗುಳ್ನಕ್ಕರು.