ನ್ಯೂಸ್

ಜೈಲಿನಿಂದ ನ್ಯಾಯಾಧೀಶರಿಗೆ ನಟ ದರ್ಶನ್ ಮನವಿ; ಪತ್ರದಲ್ಲಿ ಏನೇನಿದೆ..?

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಜೈಲೂಟ ಸೇವಿಸುತ್ತಿರುವ ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್​ ಜೈಲು ಊಟಕ್ಕಾಗಿ ಮತ್ತೊಮ್ಮೆ ಮನವಿ ಮಾಡಿದ್ದಾರೆ.

ನಟ ದರ್ಶನ್‌ ಮತ್ತೆ ಮೆನಯೂಟ ಕೋರಿ ಜೈಲಾಧಿಕಾರಿಗಳು ಹಾಗೂ ಮ್ಯಾಜಿಸ್ಟ್ರೇಟ್‌ಗೆ ಮೂರು ಪತ್ರಗಳನ್ನ ಬರೆದಿದ್ದಾರೆ. ಸ್ವತಃ ಕೈ ಬರಹದ ಮೂಲಕ ಜೈಲು ವೈದ್ಯಾಧಿಕಾರಿ, ಕಾರಾಗೃಹ ಎಡಿಜಿಪಿಗೆ, ವೈದ್ಯಾಧಿಕಾರಿಗೆ, ಮ್ಯಾಜಿಸ್ಟ್ರೇಟ್‌ಗೆ ಪತ್ರ ಬರೆದಿದ್ದಾರೆ.

ಜೂನ್ 22 ರಂದು ಕೇಂದ್ರ ಕಾರಾಗೃಹಕ್ಕೆ ಬಂದಿದ್ದು ನಾನು ದಿನನಿತ್ಯ ನನ್ನ ಮನೆಯಲ್ಲಿದ್ದಾಗ ವ್ಯಾಯಾಮ ಮಾಡುತ್ತಿದ್ದೆ ಅದರ ಜೊತೆ ದಿನನಿತ್ಯ ಪೌಷ್ಟಿಕ ಆಹಾರ ತಿನ್ನುತ್ತಿದೆ. ನನಗೆ ಮೂಳೆ ಶಸ್ತ್ರಚಿಕಿತ್ಸೆಯಾಗಿದೆ, ಪ್ರೋಟಿನ್‌ ಅವಶ್ಯಕತೆ ಇದೆ. ಕಾರಾಗೃಹಕ್ಕೆ ದಾಖಲಾದ ದಿನದಿಂದ ಜೈಲೂಟ ಸೇವೆನೆ ಮಾಡುತ್ತಿದ್ದೇನೆ. ನನ್ನ ಆರೋಗ್ಯ, ದೇಹದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಮನೆ ಊಟ ನೀಡುವಂತೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಈ ಹಿಂದೆ ಮನೆ ಊಟ ಹಾಗೂ ಹಾಸಿಗೆ ತರಿಸಿಕೊಳ್ಳಲು ಅನುಮತಿ ಕೋರಿ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಆದರೆ ಆ ಅರ್ಜಿಯು ಹೈಕೋರ್ಟ್​ನಿಂದ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಬಂದು ಅಲ್ಲಿ ವಜಾ ಆಗಿತ್ತು. ಆದರೆ ತಾಂತ್ರಿಕ ಕಾರಣ ನೀಡಿ ವಕೀಲರು ದರ್ಶನ್​ರ ಅರ್ಜಿಯನ್ನು ಹಿಂಪಡೆದಿದ್ದರು. ಈಗ ದರ್ಶನ್ ಮತ್ತೊಮ್ಮೆ ಮನೆ ಊಟಕ್ಕಾಗಿ ಮನವಿ ಸಲ್ಲಿಸಿದ್ದು, ಈ ಬಾರಿ ಜೈಲಧಿಕಾರಿಗಳಿಗೆ ಮತ್ತು ಜೈಲಿನ ವೈದ್ಯಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ಇದಕ್ಕೂ ಮುನ್ನ ಮನೆಯೂಟ, ಹಾಸಿಗೆ, ಪುಸ್ತಕಗಳಿಗೆ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಮ್ಯಾಜಿಸ್ಟ್ರೇಟ್‌ ಕೋರ್ಟ್ ಜುಲೈ 25 ರಂದು ವಜಾಗೊಳಿಸಿತ್ತು. ಅರ್ಜಿ ವಜಾಗೊಂಡ ಈ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ದರ್ಶನ್ ಪರ ವಕೀಲರು ಮೇಲ್ಮನವಿ ಸಲ್ಲಿಸಿದ್ದರು.