ನ್ಯೂಸ್

ಆರೋಪಿ ದರ್ಶನ್​ಗೆ ಜು.18ರವರೆಗೂ ನ್ಯಾಯಾಂಗ ಬಂಧನ ವಿಸ್ತರಣೆ

ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್​ಗೆ ಇದೀಗ ಬೆಂಗಳೂರಿನ ಕೋರ್ಟ್​ ಜು.18ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿದೆ. 

ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್​ ಮತ್ತು ಇತರೆ ಆರೋಪಿಗಳಿಗೆ ಜೈಲು ಅವಧಿಯನ್ನು ಜುಲೈ. 18ರವರೆಗೂ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ವಿಸ್ತರಿಸಿದೆ.