ಮೈಸೂರು: ಕನ್ನಡ ಚಿತ್ರರಂಗದ ದಿ ಮೋಸ್ಟ್ ಎಲಿಜೆಬಲ್ ಬ್ಯಾಚುಲರ್ ಎಂದೇ ಹೆಸರುವಾಸಿಯಾಗಿದ್ದ ನಟ ಧನಂಜಯ್ (Dhananjaya) ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಚಿತ್ರದುರ್ಗ ಮೂಲದ ವೈದ್ಯೆ ಧನ್ಯತಾ ಅವರೊಂದಿಗೆ ನಟ ಧನಂಜಯ್ ವಿವಾಹ ಕಾರ್ಯ ನೆರವೇರಿದೆ.
ಮೈಸೂರಿನ ಅಂಬಾವಿಲಾಸ ಅರಮನೆ ಆವರಣದಲ್ಲಿರುವ ವಸ್ತು ಪ್ರದರ್ಶನ ಮೈದಾನದಲ್ಲಿ ಮದುವೆಗಾಗಿ ಚಾಮುಂಡೇಶ್ವರಿ ದೇವಸ್ಥಾನದ ಮಾದರಿಯಲ್ಲಿ ಸೆಟ್ಅನ್ನು ನಿರ್ಮಿಸಲಾಗಿದೆ. ಧನಂಜಯ್ ಅವರ ಮದುವೆ ಶಾಸ್ತ್ರಗಳು ನಡೆಯುತ್ತಿದ್ದು ಹಲವಾರು ಸಿನಿ ತಾರೆಯರು ಆಗಮಿಸಿ ಈ ನವ ಜೋಡಿಗೆ ಶುಭ ಹಾರೈಸುತ್ತಿದ್ದಾರೆ.
ಶನಿವಾರ (ಫೆಬ್ರವರಿ 15) ನಡೆದ ಆರತಕ್ಷತೆ ಸಮಾರಂಭದಲ್ಲಿ ಗೆಳೆಯರು, ಅಭಿಮಾನಿಗಳು, ರಾಜಕಾರಣಿಗಳು, ಸಿನಿಮಾ ಸೆಲೆಬ್ರಿಟಿಗಳು ಮದುವೆ ಸಮಾರಂಭದಲ್ಲಿ ಭಾಗಿಯಾಗಿದ್ದರು. ಅಂದಾಜು 30ರಿಂದ 50 ಸಾವಿರ ಜನರು ಆರತಕ್ಷತೆಯಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲಾಗಿದ್ದು, ನಟ ಧನಂಜಯ್ ಅವರ ಮದುವೆಗೆ ಸಂಬಂಧಿಸಿದ ಸುದಿದಗಳು ವೈರಲ್ ಆಗುತ್ತಿದೆ.
ನನಗೆ ಮಂತ್ರಮಾಂಗಲ್ಯ, ವಚನ ಮಾಂಗಲ್ಯ, ರಿಜಿಸ್ಟರ್ ಮದುವೆ ಆಗುವ ಆಸೆ ಇತ್ತು. ನಮ್ಮ ಕುಟುಂಬ ಸದಸ್ಯರು, ಚಿತ್ರರಂಗ, ಸ್ನೇಹಿತರು ಎಲ್ಲರಿಗೂ ಊಟ ಹಾಕಿಸಬೇಕು. ಹೀಗಾಗಿ, ಒಂದೇ ವೇದಿಕೆಯಲ್ಲಿ ಎಲ್ಲರಿಗೂ ಊಟ ಹಾಕಿ ಆಶೀರ್ವಾದ ಪಡೆಯೋಣ ಎಂಬ ಆಸೆಯಿಂದ ಇಲ್ಲಿ ಮದುವೆ ಆಗುತ್ತಿದ್ದೇವೆ. ಚಾಮುಂಡೇಶ್ವರಿ ದೇವಾಲಯ ಮಾದರಿಯಲ್ಲಿ ವೇದಿಕೆ ನಿರ್ಮಾಣ ಆಗುತ್ತಿದೆ. ದಕ್ಷಿಣ ಭಾರತದ ಮಾದರಿಯ ಊಟದ ವ್ಯವಸ್ಥೆ ಇದೆ. ಅಭಿಮಾನಿಗಳು, ವಿಐಪಿಗಳಿಗೆ ಪ್ರತ್ಯೇಕ ಊಟದ ವ್ಯವಸ್ಥೆ ಮಾಡಲಾಗಿದೆ. ಎಲ್ಲರಿಗೂ ಒಂದೇ ಮಾದರಿಯ ಊಟ ಇರುತ್ತದೆ. ಆದರೆ, ವಿಐಪಿ ಹಾಗೂ ಸಾರ್ವಜನಿಕರಿಗೆ ಪ್ರತ್ಯೇಕವಾಗಿ ಊಟದ ವ್ಯವಸ್ಥೆ ಮಾಡಲಾಗಿದೆ. ಎಲ್ಲರೂ ಮದುವೆಗೆ ಬಂದು ಹಾರೈಸಿ ಎಂದು ನಟ ಧನಂಜಯ್ (Dhananjaya) ಆಹ್ವಾನಿಸಿದ್ದರು.