ನ್ಯೂಸ್

ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬುಗೆ ಕರೊನಾ ಪಾಸಿಟಿವ್

ಹೈದ್ರಾಬಾದ್: ತೆಲುಗಿನ ಖ್ಯಾತ ನಟ ಪ್ರಿನ್ಸ್ ಮಹೇಶ್​ ಬಾಬು ಅವರಿಗೂ ಕರೊನಾ ಸೋಂಕು ಒಕ್ಕರಿಸಿದೆ. ಈ ಬಗ್ಗೆ ಅವರು ಟ್ವಿಟ್ಟರ್​​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಅವರು, ನನ್ನ ಎಲ್ಲಾ ಅಭಿಮಾನಿಗಳಿಗೆ ಈ ಪತ್ರ. ಎಲ್ಲಾ ರೀತಿಯ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೂ ಸಹ, ನನಗೆ ಕರೊನಾ ಸೋಂಕು ದೃಢಪಟ್ಟಿದೆ. ಕ್ವಾರಂಟೈನ್​ ಆಗಿದ್ದು, ವೈದ್ಯರ ಸೂಚನೆ ಅನುಸರಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ನನ್ನ ಸಂಪರ್ಕಕ್ಕೆ ಬಂದವರೆಲ್ಲರನ್ನೂ ಕೊವಿಡ್​ ಪರೀಕ್ಷೆಗೆ ಒಳಪಡಲು ವಿನಂತಿಸಿಕೊಳ್ಳುತ್ತಿದ್ದೇನೆ ಎಂದು ಮಹೇಶ್​ ಬಾಬು ಹೇಳಿದ್ದಾರೆ.