ಹೈದರಾಬಾದ್: ರಕ್ತದೊತ್ತಡ ಸಮಸ್ಯೆಯ ಕಾರಣಕ್ಕೆ ನಿನ್ನೆ ಹೈದರಾಬಾದಿನ ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದ ಸೂಪರ್ಸ್ಟಾರ್ ರಜಿನಿಕಾಂತ್ ಅವರು ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆರೋಗ್ಯ ಸ್ಥಿತಿ ಸುಧಾರಿಸಿದ ಕಾರಣ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ರಜಿನಿಕಾಂತ್ ಅವರು ತಮ್ಮ ಅಭಿನಯದ ‘ಅಣ್ಣಾತ್ತೆ’ ಚಿತ್ರತಂಡದ ನಾಲ್ವರಲ್ಲಿ ಕರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಚಿತ್ರೀಕರಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ರಜಿನಿಕಾಂತ್ ಪ್ರತ್ಯೇಕವಾಗಿದ್ದರು. ರಕ್ತದೊತ್ತಡದಲ್ಲಿ ಏರಿಳಿತದ ಸಮಸ್ಯೆಯಿಂದ ನಿನ್ನೆ ಹೈದರಾಬಾದ್ನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಗುರುವಾರವಷ್ಟೇ ರಜಿನಿ ಅವರಿಗೆ ಕರೊನಾ ನೆಗಿಟಿವ್ ವರದಿಯಾಗಿತ್ತು.
ಇದನ್ನೂ ಓದಿ: ನಾಪತ್ತೆಯಾಗಿದ್ದ ಎಸ್ಪಿಒ ಜೆಇಎಂ ಉಗ್ರನಾಗಿ ಪತ್ತೆ !
ರಜನಿಕಾಂತ್ ಅವರು ‘ಅಣ್ಣಾತ್ತೆ’ ಚಿತ್ರವನ್ನು ಜನವರಿ 12ರೊಳಗೆ ಮುಗಿಸಬೇಕು ಎಂದು ಪ್ಲಾನ್ ಹಾಕಿಕೊಂಡಿದ್ದರು. ಅದಕ್ಕಾಗಿ ಕಳೆದ ಕೆಲವು ದಿನಗಳಿಂದ, ಪ್ರತಿದಿನ 12 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದರು. ಚಿತ್ರೀಕರಣ ಸಹ ಸಾಕಷ್ಟು ಮುಗಿದಿತ್ತು. ಎಲ್ಲಾ ಚೆನ್ನಾಗಿ ನಡೆಯುತ್ತಿರುವಾಗ, ಚಿತ್ರತಂಡದ ನಾಲ್ವರಿಗೆ ಕರೊನಾ ಪಾಸಿಟಿವ್ ಬಂದಿರುವುದರಿಂದ ಚಿತ್ರೀಕರಣ ಅನಿವಾರ್ಯವಾಗಿ ಮುಂದಕ್ಕೆ ಹೋಗಿದೆ. (ಏಜೆನ್ಸೀಸ್)
ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್ಗಾಗಿ ನಮ್ಮ ಫೇಸ್ಬುಕ್ ಪುಟ ಲೈಕ್ ಮಾಡಿ ಮತ್ತು ಫಾಲೋ ಮಾಡಿ..