ಬೆಂಗಳೂರು: ಕನ್ನಡ ಚಿತ್ರರಂಗದ ಸ್ಟಾರ್, ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ಸದ್ಯ ತಮ್ಮ ಮುಂದಿನ ಪ್ರಾಜೆಕ್ಟ್ಗಳಲ್ಲಿ ಹಾಗೂ ಕನ್ನಡದ ಬಿಗ್ ಬಾಸ್ ಸೀಸನ್ 10ರ ಕಾರ್ಯಕ್ರಮದಲ್ಲಿ ಸಖತ್ ಬ್ಯುಸಿಯಾಗಿದ್ದು, ಈ ಮಧ್ಯೆ ತಮ್ಮ ಪತ್ನಿ ಪ್ರಿಯಾ ಅವರ ಜನ್ಮದಿನಕ್ಕೆ ಪ್ರೀತಿಯಿಂದ ಶುಭಾಶಯ ಕೋರಿದ್ದಾರೆ.
ಮೆನಿ ಮೆನಿ ಹ್ಯಾಪಿ ರಿಟರ್ನ್ಸ್ ಪ್ರಿಯಾ, ಪ್ರತಿಯೊಂದರಲ್ಲೂ ಶುಭವಾಗಲಿ ಎಂದು ಹಾರೈಸುತ್ತೇನೆ. ಸದಾ ಅದ್ಬುತ ವ್ಯಕ್ತಿಯಾಗಿರುವುದಕ್ಕೆ ಧನ್ಯವಾದ ಎಂದು ತಿಳಿಸಿದ ಸುದೀಪ್, ಹ್ಯಾಪಿ 24 ಎಂದು ಹಾರ್ಟ್ ಎಮೋಜಿ ಹಾಕಿ ಟ್ವೀಟ್ ಮೂಲಕ ಶುಭಾಶಯ ತಿಳಿಸಿದ್ದಾರೆ.
ಸದ್ಯ ಬಿಗ್ ಬಾಸ್ ಕನ್ನಡ ಸೀಸನ್ 10ರ ನಿರೂಪಕರಾಗಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗುತ್ತಿರುವ ಸುದೀಪ್, ಬಿಗ್ ಬಾಸ್ನ ಫಿನಾಲೆ ವಾರಾಂತ್ಯದ ಸಂಚಿಕೆ ನಡೆಸಿಕೊಡಲು ಇದೀಗ ಸಜ್ಜಾಗಿದ್ದಾರೆ. ಈ ವಾರ ಮನೆಯಿಂದ ಯಾರು ಎಲಿಮಿನೇಟ್ ಆಗಿ ಹೊರಹೋಗಲಿದ್ದಾರೆ ಎಂಬುದನ್ನು ಸುದೀಪ್ ಅವರ ಸೂಪರ್ ಸಂಡೆ ವಿತ್ ಸುದೀಪ ಸಂಚಿಕೆಯಲ್ಲಿ ಕಾದು ನೋಡಬೇಕಿದೆ.