ನ್ಯೂಸ್

Renukaswamy ಹತ್ಯೆ ಕೇಸ್​ನಲ್ಲಿ ದರ್ಶನ್​​ಗೆ ಜಾಮೀನು ಮಂಜೂರು; ಡಿಂಪಲ್​ ಕ್ವೀನ್​​​​ ರಿಯಾಕ್ಷನ್​ ವೈರಲ್​​​

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಸ್ವಾಮಿ (Renukaswamy) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಆರೋಪಿಯಾದ ದರ್ಶನ್​ಗೆ ನ್ಯಾಯಾಲಯ ಆರು ವಾರಗಳ ಕಾಲ ಮಧ್ಯಂತರ ಜಾಮೀನನ್ನು ಮಂಜೂರು ಮಾಡಿದ್ದು, ದಾಸನ ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.

ಇತ್ತ ನಟ ದರ್ಶನ್​ಗೆ ಜಾಮೀನು ಮಂಜೂರು ಆಗುತ್ತಿದ್ದಂತೆ ಪತ್ನಿ ವಿಜಯಲಕ್ಷ್ಮೀ ಬಳ್ಳಾರಿಯ ದುರ್ಗಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದು, ಅಭಿಮಾನಿಗಳು ನೆಚ್ಚಿನ ನಟನನ್ನು ನೋಡಲು ಬಳ್ಳಾರಿ ಕೇಂದ್ರ ಕಾರಾಗೃಹದ ಮುಂಭಾಹ ಸಹಸ್ರ ಸಂಖ್ಯೆಯಲ್ಲಿ ಜಮಾಯಿಸಿದ್ದು, ದಾಸನ ಬರುವಿಕೆಗಾಗಿ ಕಾಯುತ್ತಿದ್ದಾರೆ.

ಇನ್ನೂ ದರ್ಶನ್​ಗೆ ಬೇಲ್​ ಸಿಕ್ಕಿರುವ ವಿಚಾರವನ್ನು ನಟಿ ರಚಿತಾ ರಾಮ್​ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಸಂತೋಷ್ ವ್ಯಕ್ತಪಡಿಸಿದ್ದು, ಕಾಲವೇ ಎಲ್ಲದ್ದಕ್ಕೂ ಉತ್ತರ ಕೊಡಲಿದೆ ಎಂಬರ್ಥದಲ್ಲಿ ಕಾಲಾಯ ತಸ್ಮೈ ನಮಃ ಎಂದು ಹೇಳಿರುವ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ಸಖತ್​ ವೈರಲ್​ ಆಗಿದೆ.