ನ್ಯೂಸ್

ಕೊಲೆ ಪ್ರಕರಣದಲ್ಲಿ ದರ್ಶನ್​ ಬಂಧನ: ಪ್ರತಿಕ್ರಿಯಿಸಿದ ನಟಿ ರಚಿತಾ ರಾಮ್​ ಹೇಳಿದ್ದಿಷ್ಟು

ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಕನ್ನಡ ಚಿತ್ರನಟ ದರ್ಶನ್, ಅವರ ಸ್ನೇಹಿತೆ ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳು ಇದೀಗ ಪೊಲೀಸರ ಕಸ್ಟಡಿಯಲ್ಲಿದ್ದಾರೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಯಾಂಡಲ್​ವುಡ್​ ನಟಿ ರಚಿತಾ ರಾಮ್​ ಪ್ರತಿಕ್ರಿಯಿಸಿದ್ದು, ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಈ ರೀತಿ ಬರೆದು, ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

"ನಮಸ್ಕಾರ, ಈ ನೋಟ್‌ನ ನಾನು ನಟಿಯಾಗಿ ಅಲ್ಲ ಸಾಮಾನ್ಯ ಪ್ರಜೆಯಾಗಿ ಬರೆಯುತ್ತಿದ್ದೇನೆ. ಇತ್ತೀಚಿಗೆ ನಡೆದ ಪ್ರಕರಣದ ಬಗ್ಗೆ ನನ್ನ ಮಾತು! ಮೊದಲನೇಯಾದಗಿ ರೇಣುಕಾಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಲಿ ಅವರ ಕುಟುಂಬಕ್ಕೆ ಭಗವಂತ ಧೈರ್ಯ ಭರಿಸುವ ಶಕ್ತಿ ನೀಡಲಿ ಎಂಬ ಪ್ರಾರ್ಥನೆ ಮಾಡುತ್ತೇನೆ. ಈ ಹತ್ಯೆಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆಂಬ ಭರವಸೆ ನನಗಿದೆ" ಎಂದಿದ್ದಾರೆ.

"ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದ ನಟ ದರ್ಶನ್ ಸರ್ ನನಗೆ ಗುರು ಸಮಾನರು, ನನ್ನ ಜೀವನದ ತಪ್ಪುಗಳನ್ನು ತಿದ್ದಿ ಮಾರ್ಗದರ್ಶನ ನೀಡಿದಂತಹ ವ್ಯಕ್ತಿ ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ನಂಬಲು ಸ್ವಲ್ಪ ಕಷ್ಟವಾಗುತ್ತಿದೆ. ಏನಿದ್ದರೂ ಸತ್ಯ ಪೊಲೀಸ್‌ ತನಿಖೆಯಿಂದ ನಮ್ಮ ಮುಂದೆ ಬರಲಿದೆ ಎನ್ನುವುದೆ ನನ್ನ ನಂಬಿಕೆ. ನನ್ನ ಮಾಧ್ಯಮ ಮಿತ್ರರು ಈ ಕೇಸ್‌ನ ವರದಿಯಲ್ಲಿ ಪಾರದರ್ಶಕವಾಗಿರುತ್ತಿರಿ ಮತ್ತು ನಿಷ್ಪಕ್ಷವಾಗಿ ಕೆಲಸ ಮಾಡುತ್ತಿರಿ ಎಂದು ಆಶಿಸುತ್ತೇನೆ" ಎಂದು ಬರೆದುಕೊಂಡಿದ್ದಾರೆ.