ನ್ಯೂಸ್

ಕೈ ಹಿಡಿದು ಎಳೆದವನ ಕಪಾಳಕ್ಕೆ ಬಾರಿಸಿದ ನಟಿ ರಾಗಿಣಿ ದ್ವಿವೇದಿ! Ragini Dwivedi ವಿಡಿಯೋ ನೋಡಿ

ಬೆಂಗಳೂರು:  ( Ragini Dwivedi ) ಸಾರ್ವಜನಿಕ ಸ್ಥಳದಲ್ಲಿ ಕೈಹಿಡಿದು ಎಳೆದ ಯುವಕನೊಬ್ಬನಿಗೆ ಸ್ಯಾಂಡಲ್​​ವುಡ್​ ನಟಿ ರಾಗಿಣಿ ದ್ವಿವೇದಿ ಕೆನ್ನೆಗೆ ಬಾರಿಸಿದ್ದಾರೆ. ಈ ವಿಡಿಯೋ ಸೋಶಿಯಲ್​​ ಮೀಡಿಯಾದಲ್ಲಿ ಸಖತ್​​ ವೈರಲ್​​ ಆಗುತ್ತಿದೆ.

ನಟಿ ರಾಗಿಣಿ ದ್ವಿವೇದಿ ಅವರು ಇವೆಂಟ್‌ವೊಂದರಲ್ಲಿ ಭಾಗವಹಿಸಿದ್ದರು. ಆ ವೇಳೆ ಅಭಿಮಾನಿಗಳು ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಂದಾಗಿದ್ದರು. ಇದೇ ವೇಳೆ ಅಭಿಮಾನಿಯೊಬ್ಬ ಏಕಾಏಕಿ ನಟಿ ರಾಗಿಣಿ ದ್ವಿವೇದಿ ಅವರ ಕೈಯನ್ನು ಹಿಡಿದುಕೊಂಡಿದ್ದಾನೆ.

ಸಿಟ್ಟಾಗಿದ್ದ ನಟಿ ರಾಗಿಣಿ ಆತನ ಕೆನ್ನೆಗೆ ಬಾರಿಸಿದ್ದಾರೆ. ಎಲ್ಲರ ಮುಂದೆ ಆ ಅಭಿಮಾನಿ ಮೇಲೆ ಸಿಟ್ಟಾಗಿ ಬೈದಿದ್ದಾರೆ. ನಂತರ ಅಲ್ಲಿನ ಸಿಬ್ಬಂದಿ  ಆತನನ್ನು ಬೇರೆ ಕಡೆ ಕರೆದುಕೊಂಡು ಹೋಗಿದ್ದಾರೆ.

ರಾಗಿಣಿ ದ್ವಿವೇದಿ ಅಭಿಮಾನಿಗೆ ಹೊಡೆದ ವಿಡಿಯೋ ಸೋಷಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ.