"ಯಶೋದಾ' ಎಂಬ ಚಿತ್ರದಲ್ಲಿ ಸಮಂತಾ ನಟಿಸುತ್ತಿರುವ ವಿಷಯ ಗೊತ್ತು ತಾನೇ? ಶ್ರೀದೇವಿ ಮೂವೀಸ್ ಬ್ಯಾನರ್ನಡಿ ನಿರ್ಮಾಣವಾಗುತ್ತಿರುವ ಈ ವರ್ಷದ ಆರಂಭದಲ್ಲಿ ಸೆಟ್ಟೇರಿತ್ತು. ಚಿತ್ರದ ಬಹುತೇಕ ಚಿತ್ರೀಕರಣ ಮುಗಿದಿದ್ದು, ಆಗಸ್ಟ್ 12ಕ್ಕೆ ಬಿಡುಗಡೆಯಾಗಲಿದೆಯಂತೆ. ಮೊದಲ ಹಂತವಾಗಿ ಚಿತ್ರದ ತುಣುಕೊಂದು ಇತ್ತೀಚೆಗೆ ಬಿಡುಗಡೆಯಾಗಿದೆ.
"ಯಶೋದಾ' ಚಿತ್ರದ ಶೇ. 80ರಷ್ಟು ಚಿತ್ರೀಕರಣ ಈಗಾಗಲೇ ಮುಗಿದಿದೆಯಂತೆ. ಹೈದರಾಬಾದ್ನಲ್ಲಿ ಕೊನೆಯ ಹಂತದ ಚಿತ್ರೀಕರಣ ನಡೆಯಲಿದ್ದು, ಕೊಡೈಕೆನಾಲ್ನಲಿ ಕ್ಲೆಮ್ಯಾಕ್ಸ್ ಭಾಗದ ಚಿತ್ರೀಕರಣ ನಡೆಯಲಿದೆಯಂತೆ. ಒಟ್ಟಾರೆ ಜೂನ್ ಒಂದರೊಳಗೆ ಚಿತ್ರೀಕರಣ ಮುಗಿಸಿ, ಮುಂದಿನ ಎರಡು ತಿಂಗಳಲ್ಲಿ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮಾಡಿ, ಆಗಸ್ಟ್ನಲ್ಲಿ ಚಿತ್ರವನ್ನು ತೆರೆಗೆ ತರುವುದು ಚಿತ್ರತಂಡದ ಯೋಚನೆ. ಈ ಚಿತ್ರವನ್ನು ಹರಿ ಮತ್ತು ಹರೀಶ್ ನಿರ್ದೇಶಿಸುತ್ತಿದ್ದು, ಶಿವಲೆಂಕಾ ಕೃಷ್ಣ ಪ್ರಸಾದ್ ನಿರ್ಮಾಣ ಮಾಡುತ್ತಿದ್ದಾರೆ.