ನ್ಯೂಸ್

ಕೆಜಿ ಚಿನ್ನ ಕಳವು ಪ್ರಕರಣದಲ್ಲಿ ಹೀರೋಯಿನ್​ ಅರೆಸ್ಟ್​!

ವಿಶಾಖಪಟ್ಟಣಂ: ತೆಲುಗು ಚಿತ್ರರಂಗದಲ್ಲಿ ಮತ್ತೊಂದು ಸಂಚಲನ ಮೂಡಿಸುವ ಘಟನೆ ನಡೆದಿದೆ. ಸರ್ಕಾರಿ ನೌಕರನ ಮನೆ ಕಳ್ಳತನ ಪ್ರಕರಣದಲ್ಲಿ ಸಿನಿಮಾ ನಟಿಯನ್ನು ವಿಶಾಖ ಪೊಲೀಸರು ಬಂಧಿಸಿದ್ದಾರೆ.

ತೆಲುಗು ಚಿತ್ರರಂಗದ ಉದಯೋನ್ಮುಖ ತಾರೆ ಸೌಮ್ಯಾ ಶೆಟ್ಟಿ ಬಂಧಿತಳು. ನಿವೃತ್ತ ಅಂಚೆ ನೌಕರ ಪ್ರಸಾದ್ ಅವರ ಮನೆಯಲ್ಲಿ ಕಳ್ಳತನದ ದೂರಿನ ಮೇರೆಗೆ ಸೌಮ್ಯಾ ಶೆಟ್ಟಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ಬಂಧನದಲ್ಲಿರುವ ಆಕೆಯನ್ನು ವಿಶಾಖ ಕ್ರೈಂ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಪ್ರಸಾದ್ ಮಗಳನ್ನು ಕಾಣಲು ನಟಿ ಆಗಾಗ ಅವರ ಮನೆಗೆ ಭೇಟಿ ನೀಡುತ್ತಿದ್ದಳು. ಇದರ ಹಿಂದೆ ಆಕೆ ಪ್ರಸಾದ್​ ಮನೆಯಲ್ಲಿ ಒಂದು ಕಿಲೋ ಚಿನ್ನ ಕದಿಯುವ ಯೋಜನೆ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಅದರಂತೆ ಒಂದು ದಿನ ಪ್ರಸಾದ್ ಕುಟುಂಬಸ್ಥರು ಹೊರಗೆ ಹೋಗಿದ್ದರು. ಅದನ್ನು ನೋಡಿ ನಟಿ ಚಿನ್ನಾಭರಣ ಕಳ್ಳತನ ಮಾಡಿದ್ದಾಳೆ. ಇದಾದ ನಂತರ ವಿಶಾಖದಿಂದ ಗೋವಾಕ್ಕೆ ಶಿಫ್ಟ್ ಆಗಿದ್ದಳು. ಚಿನ್ನ ಕಳ್ಳತನವಾಗಿರುವ ವಿಷಯ ತಿಳಿದ ಮನೆಯ ಸದಸ್ಯರು ಕೂಡಲೇ ಪೊಲೀಸರಿಗೆ ದೂರು ನೀಡಿದ್ದಾರೆ.

ಹಾಗಾಗಿ ನಾವು ತನಿಖೆ ನಡೆಸಿ ಆಕೆಯನ್ನು ಬಂಧಿಸಿದ್ದೇವೆ. ಸೌಮ್ಯಾ ಶೆಟ್ಟರಿಂದ ಚಿನ್ನಾಭರಣ ಹಾಗೂ ನಗದು ವಶಪಡಿಸಿಕೊಂಡಿದ್ದೇವೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೌಮ್ಯ ಶೆಟ್ಟಿ ತೆಲುಗು ಚಿತ್ರರಂಗದಲ್ಲಿ ಕೆಲವು ಚಿತ್ರಗಳಲ್ಲಿ ನಟಿಸಿರುವುದು ಗೊತ್ತೇ ಇದೆ. ಯುವರ್ಸ್, ಲವಿಂಗ್ಲಿ, ದಿ ಟ್ರಿಪ್ ಚಿತ್ರದಲ್ಲಿ ನಟಿಸಿದ್ದಾರೆ. ಕೆಲವು ಕಿರುಚಿತ್ರಗಳಲ್ಲಿ ನಟಿಸಿದ್ದಾಳೆ.