ನ್ಯೂಸ್

VIDEO| ನಡುರಾತ್ರಿ ರಸ್ತೆ ಗುಂಡಿ ಮುಚ್ಚವ ಕೆಲಸಕ್ಕೆ ಕೈ ಹಾಕಿದ ನಟಿ ಕಾರುಣ್ಯ ರಾಮ್

ಬೆಂಗಳೂರು: ನಟಿ ಕಾರುಣ್ಯ ರಾಮ್ ತಮ್ಮ ಸ್ನೇಹಿತರ ಜತೆ ಸೇರಿ ರಾಜರಾಜೇಶ್ವರಿ ನಗರ ಏರಿಯಾ ರಸ್ತೆಯಲ್ಲಿ ಬಿದ್ದಿದ್ದ ಗುಂಡಿಗಳನ್ನು ಮುಚ್ಚುವ ಮೂಲಕ ಪ್ರಶಂಸೆಗೆ ಕಾರಣರಾಗಿದ್ದಾರೆ.

ಕಾರುಣ್ಯ ಕೇವಲ ಗುಂಡಿಗಳನ್ನು ಮಾತ್ರ ಮುಚ್ಚಿಲ್ಲ. ತಮ್ಮದೇ ಆದ ಟ್ರಸ್ಟ್ ಮೂಲಕ ಹಲವಾರು ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ ಬಂದಿದ್ದಾರೆ. ಮೊನ್ನೆಯಷ್ಟೇ ರಾಜರಾಜೇಶ್ವರಿ ನಗರದಲ್ಲಿ ಆರೋಗ್ಯ ಶಿಬಿರವನ್ನು ಹಮ್ಮಿಕೊಂಡಿದ್ದರು. ಆ ಭಾಗದ ಜನರಿಗೆ ಉಚಿತ ಆರೋಗ್ಯ ತಪಾಸಣೆಯನ್ನು ಮಾಡಿಸಿದರು. ಅಲ್ಲದೇ ಕೋವಿಡ್ ವೇಳೆಯಲ್ಲೂ ಅವರು ಫುಡ್ ಕಿಟ್ ಹಂಚಿದ್ದರು. ತಮ್ಮ ಹುಟ್ಟು ಹಬ್ಬದಂದು ಅನಾಥ ಮಕ್ಕಳಿಗೆ ನೆರವಾಗುತ್ತಾ ಬಂದಿದ್ದಾರೆ.

ನಿನ್ನೆ ರಾತ್ರಿ ಹನ್ನೊಂದು ಗಂಟೆಯ ಹೊತ್ತಲ್ಲಿ ತಮ್ಮ ಸ್ನೇಹಿತರು ಮತ್ತು ಸಹೋದರಿಯ ಜತೆ ರಸ್ತೆಗಳಿಗೆ ಇಳಿದ ಕಾರುಣ್ಯ ಹತ್ತಕ್ಕೂ ಹೆಚ್ಚು ಗುಂಡಿಗಳನ್ನು ಮುಚ್ಚಿದ್ದಾರೆ. ಅವರ ಈ ಕೆಲಸಕ್ಕೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಣ್ಣ ವಿಷಯಗಳು ವ್ಯತ್ಯಾಸವನ್ನುಂಟು ಮಾಡುತ್ತವೆ. ನಮ್ಮ ತಂಡ ರಸ್ತೆ ಗುಂಡಿಗಳನ್ನು ಮುಚ್ಚುವುದನ್ನು ಒಂದು ಸವಾಲಾಗಿ ತೆಗೆದುಕೊಂಡಿದೆ. ಅಪಘಾತ, ಸಾವುಗಳಿಗೆ ಕಾರಣವಾಗುವ ಇಂತಹ ಅಡಚಣೆಗಳ ಮೂಲಕ ಪ್ರಯಾಣಿಸುವುದು ತುಂಬಾ ಅಪಾಯಕಾರಿಯಾಗಿದೆ. ನಗರದಲ್ಲಿನ ಎಲ್ಲಾ ರಸ್ತೆ ಗುಂಡಿಗಳನ್ನು ಮುಚ್ಚುವುದು ನಮ್ಮ ಹೊಸ ಯೋಜನೆಯಾಗಿದೆ ಎಂದು ಟ್ವೀಟ್​​ ಮಾಡಿದ್ದಾರೆ.