ಬೆಂಗಳೂರು: ಸ್ಯಾಂಡಲ್ವುಡ್ ಚೆಲುವೆ ಅದಿತಿ ಪ್ರಭುದೇವ ಯುಗಾದಿ ಹಬ್ಬದಂದು ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ಧಾರೆ. ಏಪ್ರಿಲ್ 04ರಂದು ಅವರು ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿರುವುದಾಗಿ ಸಾಮಾಜಿಕ ಜಾಲತಾಣದ ಮೂಲಕ ತಿಳಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ನಟಿ ಅದಿತಿ ನಮ್ಮನೆ ಮಹಾಲಕ್ಷ್ಮಿ, ಎಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ. ಏಪ್ರಿಲ್ 04ರಂದು ನಟಿ ಅದಿತಿ ಪ್ರಭುದೇವ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಇದೀಗ ಯುಗಾದಿ ಹಬ್ಬದಂದು ಮಗಳ ಆಗಮನದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅದಿತಿ ಮಾಹಿತಿ ನೀಡಿದ್ದಾರೆ.
ಇತ್ತ ಪತ್ನಿ ಅದಿತಿ ಪೋಸ್ಟ್ಗೆ ಕಮೆಂಟ್ ಮಾಡಿರುವ ಪತಿ ಯಶಸ್, ಜೀವದ ಗೆಳತಿ ಅದಿತಿ, ನಿನ್ನ ಹಾಗೆಯೇ ನಮ್ಮ ಮಗಳು ಎಂದು ಕಾಮೆಂಟ್ ಮಾಡಿದ್ದಾರೆ. ಇದೀಗ ನಟಿಗೆ ಅಭಿಮಾನಿಗಳು, ಸಿನಿಮಾ ತಾರೆಯರು ಸಾಮಾಜಿಕ ಜಾಲತಾಣಗಳಲ್ಲಿ ಶುಭಕೋರುತ್ತಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಬೇಬಿ ಬಂಪ್ ಫೋಟೋಶೂಟ್ ಮಾಡಿಸಿದ್ದ ನಟಿ ಕೊನೆಗೂ ನನ್ನ ಪುಟ್ಟ ಆಸೆ ನೆರವೇರಿದೆ ಎಂದು ಬರೆದುಕೊಂಡಿದ್ದರು.